ಈಗಿನ ಸುದ್ದಿ

ಹೈ ಸ್ಫೋಟ: ಸ್ಫೋಟಕ್ಕೆ ಐಇಡಿ ಬಳಕೆ

Published On :

ಹೈದ್ರಾಬಾದ್/ ನವದೆಹಲಿ: ಹೈದ್ರಾಬಾದ್‌ನಲ್ಲಿ ಗುರುವಾರ ಸಂಭವಿಸಿದ ಅವಳಿ  ಬಾಂಬ್ ಸ್ಫೋಟದಲ್ಲಿ  16 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

2007ರಲ್ಲಿ ಮೊದಲ ಬಾರಿಗೆ ಹೈದ್ರಾಬಾದ್‌ನಲ್ಲಿ ಉಗ್ರರು ಬಾಂಬ್ ಸ್ಫೋಟಿಸಿದ್ದು, ನಿನ್ನೆ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಉಗ್ರರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ವನ್ನು ಬಳಸಿದ್ದರು.

ದಿಲ್‌ಸುಖ್‌ನಗರ ಪ್ರದೇಶದ ವೆಂಕಟಾದ್ರಿ ಥಿಯೇಟರ್ ಪಕ್ಕ ಹಾಗು ಕೊನಾರ್ಕ್ ಥಿಯೇಟರ್ ಪಕ್ಕ ನಿನ್ನೆ ಸಂಜೆ 7 ಗಂಟೆಗೆ ಅವಳಿ ಬಾಂಬ್ ಸ್ಫೋಟ ಸಂಭವಿಸಿತ್ತು.

ಬಾಂಬ್ ಸ್ಫೋಟದ ನಂತರದ ಬೆಳವಣಿಗೆಗಳು:

-ಹೈದ್ರಾಬಾದ್ ಸ್ಫೋಟಕ್ಕೆ ಪಾಕಿಸ್ತಾನ ಖಂಡನೆ

 -ಕಾಂಗ್ರೆಸ್‌ನ ಹಿರಿಯ ನಾಯಕ ಹಾಗು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಆಜಾದ್ ಹೈದ್ರಾಬಾದ್‌ಗೆ ಭೇಟಿ.

-ನಿಷೇಧಿತ ಉಗ್ರ ಸಂಘಟನೆಯಾದ ಇಂಡಿಯನ್ ಮುಜಾಹಿದ್ದೀನ್ ನ ಕೃತ್ಯ ಇದಾಗಿದ್ದು, ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಕೆ

-ಎನ್‌ಎಸ್‌ಜಿ ಮತ್ತು ಎನ್‌ಐಎ ಯ ಫಾರೆನ್ಸಿಕ್ ತಜ್ಞರು ಮತ್ತು ರಾಜ್ಯ ಪೊಲೀಸರು ಸ್ಫೋಟ ಸ್ಥಳದಲ್ಲಿ ತಪಾಸಣೆ ನಡೆಸುತ್ತಿದ್ದು, ಅಂತಿಮ ವರದಿಯನ್ನು ನಿರೀಕ್ಷಿಸಲಾಗಿದೆ.

-ಕಳೆದ ಅಕ್ಟೋಬರ್‌ನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಉಗ್ರರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ.

-ಹೈದ್ರಾಬಾದ್ ಸ್ಫೋಟದ ಹಿನ್ನೆಲೆಯಲ್ಲಿ ಸದನದಲ್ಲಿ ಗದ್ದಲವುಂಟಾಗಿದ್ದು, ರಾಜ್ಯ ಸಭಾ ಕಲಾಪ 2.30ರ ವರೆಗೆ ಸ್ಥಗಿತ.

-ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.