ಶಾಸಕ ಸ್ಥಾನಕ್ಕೆ ಶಂಕರಲಿಂಗೇಗೌಡ ರಾಜಿನಾಮೆ

ಬೆಂಗಳೂರು: ಬಿಜೆಪಿ ಶಾಸಕರ ರಾಜಿನಾಮೆ ಪರ್ವ ಮುಂದುವರೆದಿದ್ದು, ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಶಂಕರಲಿಂಗೇಗೌಡ ಅವರು ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಬಿಜೆಪಿ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿರುವ ಶಂಕರಲಿಂಗೇಗೌಡ ಅವರು ಇಂದು ವಿಧಾನಸಭೆಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಕಾದು, ನಂತರ ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ತಮ್ಮ ರಾಜಿನಾಮೆ ಪತ್ರ ನೀಡಿದರು.
ರಾಜಿನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಂಕರಲಿಂಗೇಗೌಡ ಅವರು, ಜೆಡಿಎಸ್ ನನ್ನ ಪೂರ್ವಾಶ್ರಮ. ನಾನು ಅಧಿಕಾರಕ್ಕಾಗಿ ರಾಜಿನಾಮೆ ನೀಡುತ್ತಿಲ್ಲ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯವರು ನನಗೆ ಮಂತ್ರಿ ಸ್ಥಾನ ಕೊಡ್ತೀನಿ ಅಂತ ಭವರಸೆ ಕೊಟ್ಟು ಮೊಸ ಮಾಡಿದರು ಎಂದರು. ಅಲ್ಲದೆ ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದರು.
ಈ ಮಧ್ಯೆ, ಉಪ ಮುಖ್ಯಮಂತ್ರಿ ಆರ್. ಅಶೋಕ್ ಅವರು ಶಂಕರಲಿಂಗೇಗೌಡ ಅವರಿಗೆ ಕರೆ ಮಾಡಿ ರಾಜಿನಾಮೆ ನೀಡದಂತೆ ಮನವಿ ಮಾಡಿದರು. ಆದರೆ ಅವರ ಮನವಿಗೆ ಮಣಿಯದ ಶಂಕರಲಿಂಗೇಗೌಡ ಅವರು ರಾಜಿನಾಮೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


