ಕುರಿಯನ್ ವಿರುದ್ಧ 'ಫೇಸ್' ಟೀಕೆ: 111 ಜನರ ಮೇಲೆ ಕೇಸ್
ತಿರುವನಂತಪುರಂ: ಸೂರ್ಯನೆಲ್ಲಿ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಉಪಾಧ್ಯಕ್ಷ ಪಿ.ಜೆ ಕುರಿಯನ್ ಬಗ್ಗೆ ಫೇಸ್ಬುಕ್ನಲ್ಲಿ ಮನಬಂದಂತೆ ಟೀಕೆ ಮಾಡಿರುವ 111 ಜನರ ಮೇಲೆ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಾಗಿದೆ.
ಕೇರಳದ ಮಹಿಳಾ ಕಾಂಗ್ರೆಸ್ ನಾಯಕಿ ಬಿಂದು ಕೃಷ್ಣನ್ ಎಂಬುವವರು ಸೈಬರ್ ಸೆಲ್ನಲ್ಲಿ ಸೋಮವಾರ ಫೇಸ್ಬುಕ್ ಟೀಕಾಕಾರರ ವಿರುದ್ಧ ದೂರು ದಾಖಲಿಸಿದ್ದಾರೆ. ಫೇಸ್ಬುಕ್ನಲ್ಲಿ ಕುರಿಯನ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದು ಅವರು ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣ ಸಂಬಂಧ 120 ಜನರನ್ನು ತಿರುವನಂತಪುರಂನಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಕುರಿಯನ್ ವಿರುದ್ಧ ಸೂರ್ಯನೆಲ್ಲಿಯಲ್ಲಿ ಸಾಮೂಹಿಕ ಅತ್ಯತಾಚಾರಕ್ಕೊಳಗಾದ ಯುವತಿ ದೂರು ದಾಖಲಿಸಿದ್ದಳು. ಈ ಸಂಬಂಧ ಫೇಸ್ಬುಕ್ನಲ್ಲಿ ಅನೇಕ ಟೀಕೆಗಳು ಹರಿದಾಡಿದ್ದುವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

