ಈಗಿನ ಸುದ್ದಿ

ಕಾವೇರಿ: ನಿರ್ವಹಣಾ ಮಂಡಳಿ ರಚಿಸದಂತೆ ಕೇಂದ್ರಕ್ಕೆ ರಾಜ್ಯ ಮನವಿ

Published On :

ನವದೆಹಲಿ: ಕಾವೇರಿ ನೀರು ನಿರ್ವಹಣಾ ಮತ್ತು ನಿಯಂತ್ರಣ ಮಂಡಳಿ ರಚನೆ ಮಾಡದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರ ಬುಧವಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ನಡೆಯುತ್ತಿರುವ ರಾಜ್ಯ ಸಂಸದರ ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಮಂಡಳಿ ರಚಿಸದಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ.

ಸಭೆಯಲ್ಲಿ ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ರೆಹಮಾನ್ ಖಾನ್ ಸೇರಿದಂತೆ ರಾಜ್ಯದ 22 ಸಂಸದರು ಭಾಗಿಯಾಗಿದ್ದಾರೆ. ಸಭೆ ಮುಂದುವರೆದಿದ್ದು, ನಾಳೆ ಮಂಡನೆಯಾಗುತ್ತಿರುವ 2013-14ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಹೆಚ್ಚಿನ ನೆರವು ಕೋರುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಕಾವೇರಿ ನೀರು ನಿರ್ವಹಣಾ ಮತ್ತು ನಿಯಂತ್ರಣ ಮಂಡಳಿ ರಚಿಸುವ ಸಂಬಂಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಮಂಡಳಿ ರಚಿಸುವ ವಿಚಾರ ಇದೀಗ ಕೇಂದ್ರದ ಕೈಯಲ್ಲಿದೆ. ಹೀಗಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ನಿರ್ಧರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.