ಗ್ಯಾಂಗ್‌ರೇಪ್ ಪ್ರಕರಣ: ಅಪ್ರಾಪ್ತ ಆರೋಪಿ ವಿರುದ್ಧ ಚಾರ್ಜ್‌ಶೀಟ್
ನವದೆಹಲಿ: ದೆಹಲಿ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪ್ರಾಪ್ತ ಆರೋಪಿ ವಿರುದ್ಧ ಚಾರ್ಜ್‌ಶೀಟ್ ದಾಖಲಿಸುವಂತೆ ಬಾಲಪರಾಧ ನ್ಯಾಯಾಮಂಡಳಿ ಗುರುವಾರ ಆದೇಶಿಸಿದೆ.
23ವರ್ಷದ ಯುವತಿಯನ್ನು ಚಲಿಸುತ್ತಿದ್ದ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ ಆರು ಜನ ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತನಾಗಿದ್ದು, ಆತನ ವಿಚಾರಣೆಯನ್ನು ಬಾಲಪರಾಧಿ ನ್ಯಾಯ ಮಂಡಳಿಗೆ ವರ್ಗಾಯಿಸಲಾಗಿತ್ತು. ವಿಚಾರಣೆ ನಡೆಸಿದ ಮಂಡಳಿ ಆತನ ವಿರುದ್ಧ ಕೊಲೆ ಮತ್ತು ಅತ್ಯಾಚಾರ ಪ್ರಕರಣದಡಿ ಚಾರ್ಜ್‌ಶೀಟ್ ದಾಖಲಿಸುವಂತೆ ಸೂಚಿಸಿದೆ.
ಬಾಲಪರಾಧಿ ನ್ಯಾಯಾಮಂಡಳಿಯ ನ್ಯಾಯಾಧೀಶರಾದ ಗೀತಾಂಜಲಿ ಗೋಯಲ್ ಈ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಆರನೇ ಆರೋಪಿ 17 ವರ್ಷದ ಅಪ್ರಾಪ್ತನಾಗಿದ್ದು, ಆತನ ವಿರುದ್ಧ ಅಪಹರಣ, ಕೊಲೆ, ಸಾಕ್ಷಿ ನಾಶ ಮಾಡಲು ಯತ್ನಿಸಿದ ಆರೋಪದ ಮೇಲೆ ಚಾರ್ಜ್‌ಶೀಟ್ ದಾಖಲಿಸಿ ಎಂದು ಅವರು ಆದೇಶಿಸಿದ್ದಾರೆ.
ಡಿಸೆಂಬರ್ 16ರಂದು ಚಲಿಸುತ್ತಿದ್ದ ಬಸ್‌ನಲ್ಲಿ ಆರು ಜನ ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯ ಮೇಲೆ ಹಲ್ಲೆ ಮಾಡಿದ್ದರು. ಡಿಸೆಂಬರ್ 29ರಂದು ಸಿಂಗಾಪುರ್‌ನ ಆಸ್ಪತ್ರೆಯಲ್ಲಿ ಆಕೆ ಕೊನೆಯುಸಿರೆಳೆದಳು. ಈ ಹಿನ್ನಲೆಯಲ್ಲಿ ಐವರು ಆರೋಪಿಗಳ ವಿರುದ್ಧ ಕೊಲೆ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

