ಚುನಾವಣೆ ಫಲಿತಾಂಶ: ಮೇಘಾಲಯದಲ್ಲಿ ಕಾಂಗ್ರೆಸ್ ಮುನ್ನಡೆ
ಶಿಲ್ಲಾಂಗ್: ಮೇಘಾಲಯಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರ ಗದ್ದುಗೆಯತ್ತ ಸಾಗುತ್ತಿದ್ದು, ಈಗಾಗಲೇ ಕಾಂಗ್ರೆಸ್ 12 ಸ್ಥಾನಗಳಲ್ಲಿ ಜಯ ಗಳಿಸಿದ್ದು, ಇನ್ನು 16 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
60 ಸ್ಥಾನಗಳನ್ನು ಹೊಂದಿರುವ ಮೇಘಾಲಯ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, ಕಾಂಗ್ರೆಸ್ ಮೈತ್ರಿಕೂಟದ ಯುಡಿಪಿ ನಾಲ್ಕು ಸ್ಥಾನಗಳಲ್ಲಿ ಮತ್ತು ಎಚ್ಎಸ್ಪಿಡಿಪಿ ಮೂರು ಸ್ಥಾನಗಳಲ್ಲಿ ಜಯ ಸಾಧಿಸಿದೆ.
ಮುಖ್ಯಮಂತ್ರಿ ಮುಕುಲ್ ಸಂಗಮ್, ಅವರ ಪತ್ನಿ ಡಿಡಿ ಶಿರಾ ಹಾಗೂ ಅವರ ಸಹೋದರ ಝೆನಿತ್ ಸಂಗಮ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ.
ಏಕೈಕ ಮಹಿಳಾ ಶಾಸಕಿಯಾಗಿದ್ದ ಅಂಪರೀನ್ ಲಿಂಗ್ಡೋ ಅವರು ಮತ್ತೆ ಮೇಘಾಲಯ ವಿಧಾನಸಭೆಗೆ ಆಯ್ಕೆಯಾಗಿದ್ದು, ತಮ್ಮ ಎದುರಾಳಿ ಮಾಜಿ ಉಪ ಮುಖ್ಯಮಂತ್ರಿ ಬಿ.ಎಂ ಲನಾಂಗ್ ಅವರನ್ನು 4000 ಮತಗಳಿಂದ ಪರಾಭವಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

