ಜನತೆ ನಂಬಿಕೆಗೆ ಋಣಿ: ಮಾಣಿಕ್ ಸರ್ಕಾರ್
ತ್ರಿಪುರ: ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿ ಮತ್ತೆ ಅಧಿಕಾರ ನೀಡಿದ ರಾಜ್ಯದ ಜನತೆ ಮತ್ತು ಅವರ ನಂಬಿಕೆಯಿಂದಾಗಿ ನಮಗೆ ಮತ್ತಷ್ಟು ಹೊಣೆಗಾರಿಕೆ ಹೆಚ್ಚಾಗಿದೆ ಎಂದು ತ್ರಿಪುರದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಶುಕ್ರವಾರ ಹೇಳಿದ್ದಾರೆ.
ತ್ರಿಪುರದ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ಸತತ 5ನೇ ಬಾರಿಗೆ ಅಧಿಕಾರಕ್ಕೆ ಬಂಧಿರುವ ಸಿಪಿಎಂನ ನಾಯಕ ಹಾಗೂ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರು, ಜನರಿಗೆ ತಮ್ಮ ಪಕ್ಷದ ಮೇಲಿರುವ ವಿಶ್ವಾಸವೇ ಗೆಲುವಿಗೆ ಕಾರಣ ಎಂದು ತಿಳಿಸಿದ್ದಾರೆ.
ವಿಶ್ವಾಸವಿಟ್ಟು ಗೆಲ್ಲಿಸಿದ ಜನತೆಯ ಜೀವನವನ್ನು ಸರಿದೂಗಿಸುವುದೇ ನಮ್ಮ ಪಕ್ಷದ ಮುಂದಿನ ಗುರಿಯಾಗಿದೆ ಎಂದ ಅವರು, ಜನರ ಸಹಕಾರದಿಂದ ರಾಜ್ಯದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯಲು ಸಾಧ್ಯವಾಗಿದೆ. ಶಾಂತಿ, ಸಮರಸ ಹಾಗೂ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಾಪಾಡುವುದೇ ನಮ್ಮ ಧ್ಯೇಯವಾಗಿದೆ ಎಂದು ಅವರು ಹೇಳಿದ್ದಾರೆ.
ಜನತೆಗೆ ನೀಡಿದಂತ ಭರವಸೆಯನ್ನು ಈಡೇರಿಸಿ, ವಿಶ್ವಾಸ ಉಳಿಸಿಕೊಳ್ಳುವ ಕಾರ್ಯಗಳನ್ನು ನಮ್ಮ ಆಡಳಿತದಲ್ಲಿ ಮಾಡಲಾಗುತ್ತದೆ. ರಾಜ್ಯದ ಜನತೆ ಸತತ 5ನೇ ಬಾರಿಗೆ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿ ಜವಾಬ್ದಾರಿ ಹೆಚ್ಚಿಸಿದ್ದಾರೆ. ಅವರ ವಿಶ್ವಾಸಕ್ಕೆ ನಾವು ಚಿರಋಣಿ ಎಂದು ಮಣಿಕ್ ಸರ್ಕಾರ್ ತಿಳಿಸಿದ್ದಾರೆ.
ತ್ರಿಪುರದಲ್ಲಿ 60 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 49ಸ್ಥಾನಗಳು ಸಿಪಿಎಂ ಪಾಲಾಗಿತ್ತು. ಸಂಪೂರ್ಣ ಬಹುಮತ ಪಡೆದಿರುವ ಎಡಪಕ್ಷ 5ನೇ ಬಾರಿಗೆ ಅಧಿಕಾರಕ್ಕೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

