ಈಗಿನ ಸುದ್ದಿ

ಶೆಟ್ಟರ್ ಗೌಡರ ಸಲಹೆ ಕೇಳದೇ ಏನು ಮಾಡಲ್ಲ: ಬಿಎಸ್‌ವೈ

Published On :

ಗುಲ್ಬರ್ಗಾ: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಶೆಟ್ಟರ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಲಹೆ ಕೇಳದ ಏನೂ ಮಾಡುವುದಿಲ್ಲ ಎಂದು ಶುಕ್ರವಾರ ಆರೋಪಿಸಿದ್ದಾರೆ.

ಗುಲ್ಗರ್ಗಾದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಶೆಟ್ಟರ್ ಅವರು ಪ್ರತಿಯೊಂದಕ್ಕೂ ದೇವೇಗೌಡರ ಸಲಹೆ ಕೇಳುತ್ತಾರೆ. ಅವರನ್ನು ಕೇಳದೇ ಏನು ಮಾಡುವುದಿಲ್ಲ ಮತ್ತು ಮುಂದಿನ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲಿವೆ ಎಂದರು.

ಶೆಟ್ಟರ್ ಅವರು ಹುಬ್ಬಳಿಯನ್ನು ಉಳಿಸಿಕೊಳ್ಳುವುದು ಕಷ್ಟವಾಗಿದೆ. ಅವರಿಗೆ ಸೋಲಿನಿ ಭೀತಿ ಇದೆ ಹೀಗಾಗಿ ಅವರು ಪದೇ ಪದೇ ಹುಬ್ಬಳ್ಳಿಗೆ ಭೇಟಿ ನೀಡುತ್ತಿದ್ದಾರೆ. ಆದರೂ ಅವರು ಹುಬ್ಬಳ್ಳಿ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಪಡೆಯಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ಇದೇ ವೇಳೆ ಈಶ್ವರಪ್ಪ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಮಾಜಿ ಸಿಎಂ, ಅವರು ಶಿವಮೊಗ್ಗದಲ್ಲಿ ಗೆಲ್ಲುವುದು ಅಸಾಧ್ಯ ಎಂದಿದ್ದಾರೆ. ಅಲ್ಲದೆ ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ ಬಣ್ಣ ಬಯಲಾಗಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.