ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ, ಎಲ್ಲರ ಚಿತ್ತ ಮೋದಿಯತ್ತ

ನವದೆಹಲಿ: ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಮೂರು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಆರಂಭವಾಗಲಿದೆ.
ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಇಂದು ಮಧ್ಯಾಹ್ನ 3.45ಕ್ಕೆ ರಾಷ್ಟ್ರೀಯ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಲಿದ್ದಾರೆ. ನಂತರ ಶನಿವಾರ ಮತ್ತು ಭಾನುವಾರ ಪಕ್ಷದ ರಾಷ್ಟ್ರೀಯ ಪರಿಷತ್ ಸಭೆ ನಡೆಯಲಿದೆ.
ಈ ಕಾರ್ಯಕಾರಣಿಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರು ಎಲ್ಲರ ಗಮನ ಸೇಳೆದಿದ್ದು, ಮೋದಿ 2014ರ ಚುನಾವಣೆಯ ನೇತೃತ್ವ ವಹಿಸಿಕೊಳ್ಳಲಿದ್ದಾರೆಯೇ ಎಂಬುದರ ಬಗ್ಗೆ ಕುತೂಹಲ ಮೂಡಿದೆ.
ಗುಜರಾತ್‌ನಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿದ ನಂತರ ಮೋದಿ ಅವರು ಮೊದಲ ಬಾರಿಗೆ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿಯ ಮುಖ್ಯಸ್ಥರನ್ನಾಗಿ ಮೋದಿ ಅವರನ್ನು ಪಕ್ಷ ನೇಮಕ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಅದನ್ನು ಈ ಕಾರ್ಯಕಾರಣಿಯಲ್ಲೇ ಪ್ರಕಟಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


