ಈಗಿನ ಸುದ್ದಿ

ದುನಿಯಾ ದಾಂಪತ್ಯದಲ್ಲಿ ಬಿರುಕು: ಡೈವೋರ್ಸ್‌ಗೆ ಅರ್ಜಿ

ದುನಿಯಾ ದಾಂಪತ್ಯದಲ್ಲಿ ಬಿರುಕು: ಡೈವೋರ್ಸ್‌ಗೆ  ಅರ್ಜಿ
Published On :

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟ ದುನಿಯಾ ವಿಜಯ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ. ವಿಜಯ್ ಅವರು ತಮ್ಮ ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಕೋರಿ ನಗರದ ಕೌಟುಂಬಿಕ ಕೋರ್ಟ್‌ನಲ್ಲಿ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.

14 ವರ್ಷಗಳ ಹಿಂದೆ ವಿಜಯ್ ಅವರು ನಾಗರತ್ನ ಅವರನ್ನು ವಿವಾಹವಾಗಿದ್ದರು. ಅವರಿಗೆ ಮೂವರು ಮಕ್ಕಳಿದ್ದು, ಇದೀಗ ತಮ್ಮ ದಾಂಪತ್ಯ ಜೀವನದಲ್ಲಿ ಸಾಮರಸ್ಯ ಇಲ್ಲ ಎಂದು ಆರೋಪಿಸಿ ವಿಜಯ್ ಡೈವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ವೃದ್ಧ ತಂದೆ, ತಾಯಿಯನ್ನು ಪತ್ನಿ ನಾಗರತ್ನ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ದುನಿಯಾ ವಿಜಯ್ ಅವರು ತಾವು ಸಲ್ಲಿಸಿರುವ ಡೈವೋರ್ಸ್ ಅರ್ಜಿಯಲ್ಲಿ ದೂರಿದ್ದಾರೆ.

ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯ್, ಪತ್ನಿಯಿಂದ ನನ್ನ ತಾಯಿಗೆ ಹಾಗೂ ನನಗೆ ತುಂಬಾ ಹಿಂಸೆಯಾಗುತ್ತಿದೆ. ಇದನ್ನು ಹೇಳಿಕೊಳ್ಳಲು ಕೋರ್ಟ್ ಮುಂದೆ ಬಂದಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.