ಶಿಂಧೆಯವರ ಹೇಳಿಕೆ ಸತ್ಯ ಆಧಾರಿತ: ಸಲ್ಮಾನ್ ಖುರ್ಷಿದ್
ನವದೆಹಲಿ: ಆರ್‌ಎಸ್ಸೆಸ್ಸ್ ಕೇಸರಿ ಭಯೋತ್ಪಾದನೆ ನಡೆಸುತ್ತಿದೆ ಎಂದು ಹೇಳಿರುವ ಗೃಹ ಸಚಿವ ಸುಶಿಲ್ ಕುಮಾರ್ ಶಿಂಧೆ ಅವರಿಗೆ ಇದೀಗ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಬೆಂಬಲ ನೀಡಿದ್ದಾರೆ.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಖುರ್ಷಿದ್, ಬಿಜೆಪಿ ಮತ್ತು ಆರೆಸ್ಸೆಸ್ಸ್ ತಮ್ಮ ಶಿಬಿರಗಳಲ್ಲಿ ಭಯೋತ್ಪಾದನೆ ತರಬೇತಿ ನೀಡುತ್ತಿದೆ ಎಂದು ಹೇಳಿರುವ ಶಿಂಧೆಯವರ ಹೇಳಿಕೆ ಸತ್ಯ ಆಧಾರಿತ ಎಂದಿದ್ದಾರೆ.
ನಾನು ಗೃಹ ಸಚಿವರ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಅವರು ಹೇಳಿದ್ದು ಸರಿಯಾಗಿಯೇ ಇದೆ ಎಂದು ಖುರ್ಷಿದ್ ಹೇಳಿದ್ದಾರೆ.
ಅದೇ ವೇಳೆ ಯಾವುದೇ ಧರ್ಮಗಳಲ್ಲಿನ ಭಯೋತ್ಪಾದನೆ ಭಾರತಕ್ಕೆ ಒಳ್ಳೆಯದಲ್ಲ ಎಂದು ಹೇಳಿದ ಖುರ್ಷಿದ್, ಭಯೋತ್ಪಾದನೆಗೆ ಧರ್ಮಗಳಿಲ್ಲ ಆದರೆ ನಾವು ಪದಗಳನ್ನು ಆಚೀಚೆ ಬಳಸಿ ಗೊಂದಲಕ್ಕೊಳಗಾಗಬಾರದು ಎಂದಿದ್ದಾರೆ.
ಏತ್ಮನ್ಮಧ್ಯೆ, ಭಯೋತ್ಪಾದನೆಯ ವಿರುದ್ಧ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕೆಂದು ಖುರ್ಷಿದ್ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ.
ಭಾರತದಲ್ಲಿನ ಭಯೋತ್ಪಾದನೆಯ ವಿರುದ್ಧ ನಾವು ಹೋರಾಡುತ್ತಿದ್ದೇವೆ. ನಾನು ಈ ಮೂಲಕ ಮಾಧ್ಯಮ ಮತ್ತು ಇನನಿತರ ಜನರು ತಮ್ಮೊಂದಿಗೆ ಭಯೋತ್ಪಾದನೆ ನಿಗ್ರಹಕ್ಕೆ ಸಹಕರಿಸಬೇಕೆಂದು ವಿನಂತಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

