ಭಯೋತ್ಪಾದನೆಯಲ್ಲಿ ಆರೆಸ್ಸೆಸ್ ಕೈವಾಡ: ಕೇಂದ್ರ ಗೃಹ ಖಾತೆ ಕಾರ್ಯದರ್ಶಿ
ನವದೆಹಲಿ: ಸಂಜೋತಾ ಎಕ್ಸ್ಪ್ರೆಸ್, ಮೆಕ್ಕಾ ಮಸೀದಿ ಹಾಗು ದರ್ಗಾ ಶರೀಫ್ ಬಾಂಬ್ ಸ್ಫೋಟಗಳಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ಕೇಂದ್ರ ಗೃಹ ಖಾತೆ ಕಾರ್ಯದರ್ಶಿ ಆರ್. ಕೆ. ಸಿಂಗ್ ಹೇಳಿದ್ದಾರೆ. ಈ ಬಾಂಬ್ ಸ್ಫೋಟಗಳಲ್ಲಿ ಕೈವಾಡವಿರುವ ಕನಿಷ್ಠ 10 ಮಂದಿಯ ಹೆಸರು ಗುಪ್ತ ಮಾಹಿತಿ ದಳದ ಕೈಯಲ್ಲಿದೆ ಎಂದು ಸಿಂಗ್ ಹೇಳಿದ್ದಾರೆ.
ಏತನ್ಮಧ್ಯೆ, ಭಯೋತ್ಪಾದನಾ ಕೃತ್ಯಗಳಲ್ಲಿ ಆರೆಸ್ಸೆಸ್ನ ಕೈವಾಡವಿರುವ ಬಗ್ಗೆ ನಮ್ಮಲ್ಲಿ ಸಾಕ್ಷ್ಯಗಳಿವೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಮತ್ತು ಆರೆಸ್ಸೆಸ್ ತಮ್ಮ ಶಿಬಿರಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದೆ. ಈ ಮೂಲಕ ಬಿಜೆಪಿ ಕೇಸರಿ ಭಯೋತ್ಪಾದನೆ ಮಾಡುತ್ತಿದೆ ಎಂದು ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಭಾನುವಾರ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಬಿಜೆಪಿಯಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಶಿಂಧೆ ತಲೆದಂಡವಾಗಬೇಕು ಹಾಗು ಇದಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆ ಕೇಳಬೇಕೆಂದು ಬಿಜೆಪಿ ಪಟ್ಟು ಹಿಡಿದಿತ್ತು.
ಸಂಜೋತಾ ಎಕ್ಸ್ಪ್ರೆಸ್, ಮೆಕ್ಕಾ ಮಸೀದಿ ಹಾಗು ಮಾಲೆಗಾಂವ್ವಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಬಿಜೆಪಿ- ಆರೆಸ್ಸೆಸ್ಸ್ ಕೈವಾಡವಿದೆ ಎಂದು ಶಿಂಧೆ ಹೇಳಿದ್ದರು.
ಇದೀಗ ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಕೂಡಾ ಶಿಂಧೆ ಹೇಳಿಕೆಯನ್ನು ಬೆಂಬಲಿಸಿ, ಈ ಆರೋಪಕ್ಕೆ ಸಾಕ್ಷಿಗಳಿವೆ ಎಂದು ಹೇಳಿರುವುದು ಇನ್ನೊಂದು ವಿವಾದಕ್ಕೆ ನಾಂದಿ ಹಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

