ರಾಜಕೀಯ ಪಿತೂರಿಯಿಂದಾಗಿಯೇ ನಾನು ಹೊರ ನಡೆದೆ: ಗಡ್ಕರಿ
ನವದೆಹಲಿ: ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರಾಧ್ಯಕ್ಷರಾಗಿ ನೇಮಕವಾಗಿರುವ ರಾಜ್ನಾಥ್ ಸಿಂಗ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ನಂತರ ಮಾತನಾಡಿದ ಬಿಜೆಪಿ ಮಾಜಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ, ತಾನು ಎರಡನೇ ಬಾರಿ ರಾಷ್ಟ್ರಾಧ್ಯಕ್ಷ ಪಟ್ಟಕ್ಕೇರದೇ ಇರುವುದಕ್ಕೆ ರಾಜಕೀಯ ಪಿತೂರಿ ಕಾರಣ ಎಂದಿದ್ದಾರೆ.
ನಾನು ರಾಜ್ನಾಥ್ ಸಿಂಗ್ ಅವರನ್ನು ಅಭಿನಂದಿಸುತ್ತೇನೆ. ನಾನು ಅವರ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ನಾವು 2014ರ ಚುನಾವಣೆಯಲ್ಲಿ ಗೆಲ್ಲುವಂತೆ ಮಾಡುವ ನಾಯಕತ್ವ ಅವರಲ್ಲಿದೆ ಎಂದು ಗಡ್ಕರಿ ಪ್ರಶಂಸಿಸಿದ್ದಾರೆ.
ಎರಡನೇ ಬಾರಿ ಅಧ್ಯಕ್ಷೀಯ ಚುನಾವಣೆ ಎದುರಿಸಲು ನಾನು ಮುಂದಾಗಿದ್ದರೂ, ನನಗೆ ಸಂಬಂಧವಿಲ್ಲದೇ ಇರುವ ವಿಷಯಗಳನ್ನು ಎಳೆದು ತಂದು ರಾಜಕೀಯ ಪಿತೂರಿ ನಡೆಸಲಾಗಿದೆ. ತಮ್ಮ ಮೇಲಿರುವ ಅವ್ಯವಹಾರ ಆರೋಪಗಳನ್ನು ಉಲ್ಲೇಖಿಸಿ ಗಡ್ಕರಿ ಈ ಮಾತನ್ನಾಡಿದ್ದಾರೆ.
ಗಡ್ಕರಿ ಅವರ ಪುರ್ತಿ ಗ್ರೂಪ್ ಕಂಪನಿಗಳ ಮೇಲೆ ಈ ಅವ್ಯವಹಾರ ಆರೋಪ ಕೇಳಿ ಬರುತ್ತಿದ್ದು, ಗಡ್ಕರಿ ಈ ಆರೋಪಗಳನ್ನೆಲ್ಲಾ ತಳ್ಳಿ ಹಾಕಿದ್ದಾರೆ.
ರಾಷ್ಟ್ರಾಧ್ಯಕ್ಷ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಮಂಗಳವಾರ ಪುರ್ತಿ ಗ್ರೂಪ್ನೊಂದಿಗೆ ಸಂಪರ್ಕವಿರುವ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.
ಈ ಬಗ್ಗೆ ಮಾತನಾಡಿದ ಗಡ್ಕರಿ, ನನ್ನ ರಾಜಕೀಯ ವ್ಯಕ್ತಿತ್ವವನ್ನು ಹಾಳು ಮಾಡುವುದಕ್ಕಾಗಿ ಈ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಆದಾಗ್ಯೂ, ಪಕ್ಷದ ಹಿತದೃಷ್ಟಿಯನ್ನು ಪರಿಗಣಿಸಿ ತಾನು ರಾಷ್ಟ್ರಾಧ್ಯಕ್ಷರಾಗಿ ಮುಂದುವರಿಯುವುದಿಲ್ಲ ಎಂಬ ನಿರ್ಧಾರವನ್ನು ತೆಗೆದುಕೊಂಡಿದ್ದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

