ಶಿಂಧೆ ಹೇಳಿಕೆ ವಿರುದ್ಧ ರಾಷ್ಟ್ರಾದ್ಯಂತ ಪ್ರತಿಭಟನೆ: ರಾಜನಾಥ್
ನವದೆಹಲಿ: ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಹೇಳಿಕೆಯ ವಿರುದ್ಧ ಗುರುವಾರ ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು
ಭಾರತೀಯ ಜನತಾ ಪಕ್ಷದ(ಬಿಜೆಪಿ) ನೂತನ ಅಧ್ಯಕ್ಷ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.
ಇಂದು ಅಧಿಕೃತವಾಗಿ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ರಾಜ್‌ನಾಥ್ ಸಿಂಗ್, ಬಿಜೆಪಿ ಹಿಂದೂ ಭಯೋತ್ಪಾದಕರ ತರಬೇತಿ ಶಿಬಿರ ನಡೆಸುತ್ತಿದೆ ಎಂದಿದ್ದ ಶಿಂಧೆ ಹೇಳಿಕೆ ವಿರುದ್ಧ ಕಿಡಿ ಕಾರಿದರು. ಅಲ್ಲದೆ ಕಾಂಗ್ರೆಸ್ ವಿರುದ್ಧ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಶಿಂಧೆ ಅವರ ಹೇಳಿಕೆಗೆ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಇಲ್ಲವಾದರೆ ಪ್ರತಿಭಟನೆ ಮುಂದುವರೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಶಿಂಧೆ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳದೇ ಅದನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ಬಿಜೆಪಿ ವಕ್ತಾರ ಶಹನವಾಜ್ ಹುಸ್ಸೇನ್ ಅವರು ಮಾತನಾಡಿ, ಶಿಂಧೆ ಅವರ ಹೇಳಿಕೆ ಪಾಕಿಸ್ತಾನದ ಭಯೋತ್ಪಾದಕರನ್ನು ಪ್ರಚೋದಿಸಿದಂತಿದೆ. ಇಂತಹ ಹೇಳಿಕೆಯಿಂದ ಉಗ್ರರಿಗೆ ರೆಕ್ಕೆ ಬಂದಂತಾಗುತ್ತದೆ. ಆದ್ದರಿಂದ ಶಿಂಧೆ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

