ಈಗಿನ ಸುದ್ದಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಜಗನ್ ಜಾಮೀನು ವಜಾ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಜಗನ್ ಜಾಮೀನು ವಜಾ
Published On :

ಹೈದರಾಬಾದ್: ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ಮೋಹನ್ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ಈ ಮುಂಚೆ ಜಗನ್ ಅವರು ಸಲ್ಲಿಸಿದ್ದ ಮತ್ತೊಂದು ಜಾಮೀನು ಅರ್ಜಿಯನ್ನು ಡಿಸೆಂಬರ್ 24ರಂದು ಆಂಧ್ರ ಹೈಕೋರ್ಟ್ ವಜಾಗೊಳಿಸಿತ್ತು.

ಕಳೆದ ವರ್ಷ ನವೆಂಬರ್ 28ರಂದು ಸಿಬಿಐ ವಿಶೇಷ ಕೋರ್ಟ್ ಜಗನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಜಗನ್ ಅವರು ಹೈಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಜಾಮೀನು ಅರ್ಜಿ ಸಲ್ಲಿಸಿದ್ದರು.

ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಕಳೆದ ಮೇ 27ರಂದು ಜಗನ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿದ್ದರು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಸದ್ಯ ಚಂಚಲಗುಡ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.