ಈಗಿನ ಸುದ್ದಿ

ಪಾಕಿಸ್ತಾನದ ಜೈಲಿನಲ್ಲಿ ಭಾರತೀಯ ಖೈದಿ ಸಾವು

Published On :

ಇಸ್ಲಮಾಬಾದ್: ಪಾಕಿಸ್ತಾನದ ಜೈಲು ಅಧಿಕಾರಿಗಳಿಂದ ಹಲ್ಲೆಗೊಳಗಾಗಿದ್ದ ಭಾರತೀಯ ಮೂಲದ ಖೈದಿಯೊಬ್ಬ ಸಾವನ್ನಪ್ಪಿರುವ ಘಟನೆ ಶುಕ್ರವಾರ ವರದಿಯಾಗಿದೆ.

ಬೇಹುಗಾರಿಕೆ ಅಪರಾಧದ ಮೇಲೆ 5 ವರ್ಷಗಳ ಜೈಲು ಶಿಕ್ಷೆಗೆ ಒಳಪಟ್ಟಿದ್ದ ಚಮಲ್ ಸಿಂಗ್ ಅವರನ್ನು ಪಾಕಿಸ್ತಾನದ ಜೈಲು ಅಧಿಕಾರಿಗಳು ಹಲ್ಲೇ ಮಾಡಿದ ಹಿನ್ನಲೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಮಲ್ ಸಿಂಗ್ ಎಂಬ ಭಾರತೀಯ ಮೂಲದ ಖೈದಿ ಜೈಲಿನಲ್ಲಿ ಬಟ್ಟೆ ಒಗೆಯುತ್ತಿರಬೇಕಾದರೆ ಜೈಲು ಅಧಿಕಾರಿಗಳಿಂದ ಹೊಡೆತ ತಿಂದು ಜಿನ್ಹಾ ಆಸ್ಪತ್ರೆಗೆ ಸೇರಿಸಲಾಯಿತು. ಎರಡು ದಿನಗಳ ನಂತರ ಸಿಂಗ್ ಸಾವನಪ್ಪಿದ್ದಾರೆ. ಅಲ್ಲದೇ, ಚಮಲ್ ಸಿಂಗ್ ಅವರು ಜನವರಿ 15ರಂದು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ ಎಂದು ಭಾರತದ ರಾಯಭಾರ ಕಛೇರಿ ತಿಳಿಸಿದೆ.

ಇತ್ತೀಚೆಗಷ್ಟೇ ಬಿಡುಗಡೆಯಾದ ಲಾಹೋರ್ ಜೈಲಿನಿಂದ ಬಿಡುಗಡೆಯಾದ ತೆಹಸೀನ್ ಖಾನ್ ಅವರು ಚಮಲ್ ಸಿಂಗ್ ಮೇಲೆ ಜೈಲು ಅಧಿಕಾರಿಗಳು ಹಲ್ಲೇ ಮಾಡಿರುವುದನ್ನು ಕಣ್ಣಾರೇ ನೋಡಿದ್ದಾರೆ ಎಂದು ತೆಹಸೀನ್ ಪರ ವಕೀಲರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಾಕಿಸ್ತಾನದ ಜೈಲಿನಲ್ಲಿ ಭಾರತೀಯ ಮೂಲದ ಖೈದಿಗಳ ಮೇಲೆ ಹಲ್ಲೆ ನಡೆಯುತ್ತಿರುವುದು ಭಯ ತಂದಿದೆ ಎಂದು ಜನವರಿ 18ರಂದು ಪಾಕಿಸ್ತಾನದ ಜೈಲಿನಿಂದ ಬಿಡುಗಡೆಯಾದ ತೆಹಸೀನ್ ಖಾನ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.