ಈಗಿನ ಸುದ್ದಿ

ಬಹುಮತ ಸಾಬೀತು ಪಡಿಸಲು ಹೇಳಿಲ್ಲ: ಸಿಎಂ

ಬಹುಮತ ಸಾಬೀತು ಪಡಿಸಲು ಹೇಳಿಲ್ಲ: ಸಿಎಂ
Published On :

ಬೆಂಗಳೂರು: ಶುಕ್ರವಾರ ರಾಜ್ಯಪಾಲ ಹಂಸರಾಜ್ ಭಾರದ್ವಾಜ್‌ರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯಪಾಲರು ಬಹುಮತ ಸಾಬೀತು ಪಡಿಸಲು ಹೇಳಿಲ್ಲ ಎಂದಿದ್ದಾರೆ.

ಬಿಜೆಪಿಯ 13 ಶಾಸಕರು ರಾಜಿನಾಮೆ ನೀಡಿ ಹೊರ ನಡೆಯಲು ಮುಂದಾಗಿರುವ ಬಗ್ಗೆ ರಾಜ್ಯಪಾಲರು ನನ್ನ ಗಮನ ಸೆಳೆದಿದ್ದಾರೆ. ನಾನು ನಮ್ಮ ಸರ್ಕಾರದಲ್ಲಿ ಬಹುಮತವಿದೆ, ಸರ್ಕಾರಕ್ಕೆ ಯಾವುದೇ ಸಮಸ್ಯೆಗಳಿಲ್ಲ ಎಂದು ಅವರಿಗೆ ಮನವರಿಕೆ ಮಾಡಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ.

ಏತನ್ಮಧ್ಯೆ, ರಾಜ್ಯಪಾಲ ಮತ್ತು ಮುಖ್ಯಮಂತ್ರಿ ನಡುವಿನ ಸಭೆಗೆ ಮುನ್ನ ಮಾತನಾಡಿದ ರಾಜ್ಯಪಾಲರು, ಅಗತ್ಯವಿದ್ದರೆ ತಾನು ಮುಖ್ಯಮಂತ್ರಿಯವರಲ್ಲಿ ಬಹುಮತ ಸಾಬೀತು ಪಡಿಸಲು ಆದೇಶಿಸುತ್ತೇನೆ ಎಂದು ಹೇಳಿದ್ದರು.

ಆದಾಗ್ಯೂ, ಫೆ.4ರಂದು ನಡೆಯಲಿರುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ರಾಜ್ಯಪಾಲರು ಸರ್ಕಾರದ ಆಮಂತ್ರಣವನ್ನು ಸ್ವೀಕರಿಸಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.

ಪ್ರಸ್ತುತ ವರ್ಷದಲ್ಲಿ ಸರ್ಕಾರ ಏನೇನು ಯೋಜನೆಗಳನ್ನು ರೂಪಿಸಿದೆ ಎಂಬುದರ ಬಗ್ಗೆ ವಿವರಣೆ ನೀಡಲು 10 ದಿನಗಳ ಈ ಅಧಿವೇಶನವನ್ನು ನಡೆಸಲಾಗುತ್ತದೆ.

ಅದೇ ವೇಳೆ ಫೆ.8ಂರದು 2013-14 ಬಜೆಟ್ ಮಂಡನೆ ಮಾಡಲು ಶೆಟ್ಟರ್ ನಿರ್ಧರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.