ಫೆ.4ರೊಳಗೆ ಬಹುಮತ ಸಾಬೀತು ಪಡಿಸಲು ಆದೇಶ

ಬೆಂಗಳೂರು: ಫೆಬ್ರವರಿ 4 ತಾರೀಖಿನೊಳಗೆ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಆದೇಶ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನಿಷ್ಠರಾಗಿರುವ 13 ಶಾಸಕರು ಶೆಟ್ಟರ್ ಸರ್ಕಾರಕ್ಕೆ ರಾಜಿನಾಮೆ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಶೆಟ್ಟರ್ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಬೇಕಾದ ಪರಿಸ್ಥಿತಿ ಬಂದೊದಗಿದೆ.
ಸಿಎಂ ಶೆಟ್ಟರ್ ಗುರುವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಾಜ್ಯಪಾಲರು ಈ ಆದೇಶವನ್ನು ನೀಡಿದ್ದಾರೆ.
ಆದರೆ ತಮಗೆ ಸಂಖ್ಯಾಬಲವಿದೆ. ನಾವು ಬಹುಮತ ಸಾಬೀತು ಪಡಿಸುತ್ತೇವೆ ಎಂದು ಶೆಟ್ಟರ್ ಹೇಳಿದ್ದಾರೆ.
ಸ್ಪೀಕರ್ ಬೋಪಯ್ಯ ಅವರು ವಿದೇಶ ಪ್ರವಾಸದಲ್ಲಿರುವುದರಿಂದ 13 ಶಾಸಕರ ರಾಜಿನಾಮೆ ಸ್ವೀಕೃತವಾಗಿಲ್ಲ. ಏತನ್ಮಧ್ಯೆ, ರಾಜಿನಾಮೆ ನೀಡಲು ಮುಂದಾಗಿರುವ ಶಾಸಕರು ರಾಜಭವನಕ್ಕೆ ತೆರಳಿ ಸ್ಪೀಕರ್ ಅನುಪಸ್ಥಿತಿಯ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಶೆಟ್ಟರ್ಗೆ ಬುಲಾವ್ ನೀಡಿದ್ದು, ಸರ್ಕಾರ ಬಹುಮತ ಸಾಬೀತು ಪಡಿಸಲು ಆದೇಶ ಹೊರಡಿಸಿದ್ದಾರೆ.
ಸಿಎಂ ಉದಾಸಿ ಮತ್ತು ಶೋಭಾ ಕರಂದ್ಲಾಜೆ ತಮ್ಮ ಸಚಿವ ಸ್ಥಾನಕ್ಕೆ ಹಾಗು 13 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದು, ಇದರಿಂದಾಗಿ ಶೆಟ್ಟರ್ ಸರ್ಕಾರ ಸಂಕಷ್ಟಕ್ಕೀಡಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


