ಭಾರತದ ಸ್ನೇಹವನ್ನು ತಪ್ಪಾಗಿ ಅರ್ಥೈಸಬಾರದು: ರಾಷ್ಟ್ರಪತಿ
ನವದೆಹಲಿ: 64ನೇ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತದ ಸ್ನೇಹವನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದು ಎಂದು ಹೇಳಿದ್ದಾರೆ.
ಗಡಿ ನಿಯಂತ್ರಣಾ ರೇಖೆಯಲ್ಲಿ ಭಾರತೀಯ ಸೈನಿಕರನ್ನು ಬರ್ಬರವಾಗಿ ಹತ್ಯೆಗೈದ ಘಟನೆಯನ್ನು ಪ್ರಣಬ್ ಈ ವೇಳೆ ಖಂಡಿಸಿದ್ದಾರೆ.
ಅದೇ ವೇಳೆ ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಉಲ್ಲೇಖಿಸಿದ ರಾಷ್ಟ್ರಪತಿ ದೇಶದಲ್ಲಿ ಲಿಂಗ ಸಮಾನತೆ ಮೂಡಬೇಕಾಗಿದ್ದು, ಎಲ್ಲ ಭಾರತೀಯ ಮಹಿಳೆಯರಿಗೂ ಸಮಾನ ಹಕ್ಕು ಸಿಗುವಂತಾಗಬೇಕು ಎಂದು ಹೇಳಿದ್ದಾರೆ.
ಯುವಜನಾಂಗವೇ ಬದಲಾವಣೆಯ ರುವಾರಿ ಎಂದು ಹೇಳಿದ ಪ್ರಣಬ್, ದೇಶದಲ್ಲಿ ಉತ್ತಮ ರೀತಿಯ ಅಭಿವೃದ್ಧಿಗಳಾಗಬೇಕಾದರೆ ಯುವಜನತೆ ಉತ್ಸುಕರಾಗಿರಬೇಕೆಂದು ಹೇಳಿದ್ದಾರೆ.
ಆದಾಗ್ಯೂ, ಅಭಿವೃದ್ಧಿಯ ಸೂಚ್ಯಂಕಗಳು ಪ್ರಗತಿ ತೋರಿಸಿದರ ಸಾಲದು ಸಮಾಜದ ಎಲ್ಲ ಜನತೆಗೂ ಅಭಿವೃದ್ಧಿ ಯೋಜನೆಗಳು ತಲುಪಿದರೆ ಮಾತ್ರ ಅದು ಪ್ರಗತಿ ಎಂದು ಹೇಳಲ್ಪಡುತ್ತದೆ.
ಮಾತ್ರವಲ್ಲದೆ ಚುನಾಯಿತ ರಾಜಕಾರಣಿಗಳು ದೇಶದ ಅಭಿವೃದ್ಧಿಗೆ ಸಹಕರಿಸುವ ಮೂಲಕ ಜನರ ವಿಶ್ವಾಸವನ್ನು ಗಳಿಸಬೇಕು. ವಿದ್ಯಾಭ್ಯಾಸದ ಮೂಲಕ ಮಾತ್ರ ಸಮಾಜದಲ್ಲಿ ಸಮಾನತೆ ಹಾಗು ಆರ್ಥಿಕ ದೃಢತೆ ತರಲು ಸಾಧ್ಯ ಎಂದು ಪ್ರಣಬ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

