ಶೂಟೌಟ್ ಪ್ರಕರಣ: ಸ್ವಗೃಹಕ್ಕೆ ವಿಜಯ್ ಕುಮಾರ್ ಮೃತ ದೇಹ
ಬೆಂಗಳೂರು: ಪೇದೆಯಿಂದ ಹತರಾದ ರಾಜಾನಕುಂಟೆ ಸಬ್ ಇನ್ಸ್ ಪೆಕ್ಟರ್ ವಿಜಯ್ ಕುಮಾರ್ ಮೃತದೇಹವನ್ನು ಅವರ ಸ್ವಗೃಹಕ್ಕೆ ತರಲಾಗಿದೆ.
ಸಹೋದ್ಯೋಗಿ ಪೇದೆಯಿಂದ ಹತರಾಗಿದ್ದ ಪಿಎಸ್ಐ ವಿಜಯ್ ಕುಮಾರ ಅವರ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಬಾಬುಸಾಬ್ ಪಾಳ್ಯದ ಅವರ ನಿವಾಸಕ್ಕೆ ತರಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ವಿಜಯ್ ಕುಮಾರ್ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವಿಜಯ್ ಕುಮಾರ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯತ್ತ ದೌಡಾಯಿಸಿರುವ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯ್ ಕುಮಾರ್ ಅವರನ್ನು ಕೊಂದ ಪೇದೆ ಆನಂದ್ನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಆಸ್ಪತ್ರೆಗೆ ಸ್ಥಳೀಯ ಶಾಸಕರಾದ ಆರ್ ವಿಶ್ವನಾಥ್ ಅವರು ಆಗಮಿಸಿ ವಿಜಯ್ ಕುಮಾರ್ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಇಂದು ಬೆಳಿಗ್ಗೆ ಬೆಂಗಳೂರು ಗ್ರಾಮಾಂತರದ ರಾಜಾನಕುಂಟೆ ಪೊಲೀಸ್ ಠಾಣೆಯಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಪಿಎಸ್ಐ ವಿಜಯ ಕುಮಾರ್ ಅವರು ತಮ್ಮ ಸಹೋದ್ಯೋಗಿ ಪೇದೆ ಆನಂದ್ ಅವರಿಂದ ಗುಂಡೇಟು ತಿಂದು ಸಾವನ್ನಪ್ಪಿದ್ದರು. ರಜೆ ವಿಚಾರದಲ್ಲಿ ಶುರುವಾದ ಜಗಳ ತಾರಕ್ಕೇರಿ ಪೇದೆ ಆನಂದ್ ತಮ್ಮ .303 ರೈಫಲ್ ನಿಂದ ವಿಜಯ್ ಕುಮಾರ್ ಅವರ ಮೇಲೆ 3 ಸುತ್ತು ಗುಂಡು ಹಾರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

