ಪಾಕ್ ಸಚಿವರ ಹೇಳಿಕೆ ವಿರೋಧಿಸಿದ ರಾಜಕೀಯ ಪಕ್ಷಗಳು
ನವದೆಹಲಿ: ಬಾಲಿವುಡ್ ಸ್ಟಾರ್ ಶಾರೂಖ್ ಖಾನ್ ಗೆ ಭಾರತ ಸರ್ಕಾರ ಬಿಗಿ ಭದ್ರತೆ ಕಲ್ಪಿಸಿ, ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಹೇಳಿದ್ದ ಪಾಕಿಸ್ತಾನದ ಆಂತರಿಕ ಸಚಿವ ರೆಹಮಾನ್ ಮಲಿಕ್ ವಿರುದ್ಧ ಭಾರತ ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಗುಡಿಗಿದ್ದಾರೆ.
ಬಿಗಿ ಭದ್ರತೆ ಬಗ್ಗೆ ಮೊದಲು ಪಾಕಿಸ್ತಾನ ತಿಳಿದುಕೊಳ್ಳಲಿ. ಪಾಕಿಸ್ತಾನದ ನಾಗರಿಕರಿಗೆ ಬಿಗಿ ಭದ್ರತೆ ಕಲ್ಪಿಸುವತ್ತಾ ಹೆಚ್ಚು ಗಮನ ಹರಿಸಲಿ ಎಂದು ಸರ್ಕಾರ ಹೇಳಿದೆ.
ನಮ್ಮ ನಾಗರಿಕರ ಯಾವ ರೀತಿ ಭದ್ರತೆ ಕಲ್ಪಿಸಬೇಕು ಎಂಬುದು ನಮಗೆ ತಿಳಿದಿದೆ. ಮೊದಲು ಅವರು ತಮ್ಮ ದೇಶದ ಜನತೆಗೆ ರಕ್ಷಣೆ ನೀಡಲಿ ಎಂದು ಮಲಿಕ್ ವಿರುದ್ಧ ಕೇಂದ್ರ ಗೃಹ ಕಾರ್ಯದರ್ಶಿ ಆರ್.ಕೆ ಸಿಂಗ್ ಹೇಳಿದ್ದಾರೆ. ಮಾಹಿತಿ ಮತ್ತು ಪ್ರಸಾರ ಸಚಿವ ಮನೀಶ್ ತಿವಾರಿ ಮಾತನಾಡಿ, ಮಲಿಕ್ ಅವರು ತಮ್ಮ ದೇಶದಲ್ಲಿರುವ ಅಲ್ಪಸಂಖ್ಯಾತರ ಬಗ್ಗೆ ಮೊದಲು ಕಾಳಜಿವಹಿಸಲಿ ಎಂದು ಟೀಕಿಸಿದ್ದಾರೆ.
ಭಾರತ ತಮ್ಮ ನಾಗರಿಕರ ರಕ್ಷಣೆ ಮಾಡುವ ಸಾಮರ್ಥ್ಯ ಹೊಂದಿದೆ. ನಾವು ಎಲ್ಲರನ್ನು ಸಮಾನವಾಗಿ ಕಾಣುತ್ತೇವೆ. ಮಲಿಕ್ ಅವರ ಹೇಳಿಕೆ ನಗುಬರುವಂತಹದ್ದು ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಪಾಕ್ ಆಂತರಿಕ ಸಚಿವ ರೆಹಮಾನ್ ಮಲಿಕ್, ತಮಗೆ ಇಷ್ಟ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಅವರು ತಮ್ಮ ದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ರಕ್ಷಣೆ ಕಲ್ಪಿಸಲಿ. ಪಾಕ್ ದೇಶದ ನಾಗರಿಕರಿಗೆ ಕಲ್ಪಿಸಿರುವ ರಕ್ಷಣೆ ಬಗ್ಗೆ ನಮಗೆ ತಿಳಿದೇ ಇದೆ. ಇಂತಹ ಅನಗತ್ಯ ಸಲಹೆ ನೀಡುವುದನ್ನಾ ಪಾಕ್ ಮೊದಲು ನಿಲ್ಲಿಸಲಿ ಎಂದು ತಿವಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

