ಈಗಿನ ಸುದ್ದಿ

ಪ್ರತ್ಯೇಕ ತೆಲಂಗಾಣ: 7 ಕಾಂಗ್ರೆಸ್ ಎಂಪಿಗಳು ನಾಳೆ ರಾಜಿನಾಮೆ?

Published On :

ಹೈದ್ರಾಬಾದ್: ಪ್ರತ್ಯೇಕ ತೆಲಂಗಾಣ ಸಂಬಂಧ ಆಂಧ್ರ ಪ್ರದೇಶದ ಏಳು ಜನ ಸಂಸದರು ನಾಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಲಿದ್ದಾರೆ.

ಪ್ರತ್ಯೇಕ ತೆಲಂಗಾಣಕ್ಕಾಗಿ ಕಳೆದ ಹಲವಾರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ, ಕಾಂಗ್ರೆಸ್ ಯಾವುದೇ ಬೇಡಿಕೆ ಈಡೇರಿಸಿದ ಕಾರಣ ಆಂಧ್ರ ಪ್ರದೇಶದ ಸಂಸದರು ನಾಳೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ.

ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ಒತ್ತಾಯಿಸಿ ಸೋಮವಾರದಿಂದ ಸಮರ ಧೀಕ್ಷಾ ಪ್ರತಿಭಟನೆ ನಡೆಸಲಾಗುತ್ತಿದ್ದು, ನಾಳೆಯೂ ಪ್ರತಿಭಟನೆ ಮುಂದುವರೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನಾಳೆ ದೆಹಲಿಗೆ ತೆರಳಲಿರುವ ಸಂಸದರು, ಸೋನಿಯಾ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿ, ತೆಲಂಗಾಣದ ಸಮಸ್ಯೆಗಳ ಬಗ್ಗೆ ವಿವರಿಸುವ ನಿರ್ಧಾರ ತೆಗೆದು ಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಪ್ರತ್ಯೇಕ ತೆಲಂಗಾಣ ರಾಜ್ಯ ಬೇಡಿಕೆಗೆ 2009 ಡಿಸೆಂಬರ್ 9ರಂದು ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಆದರೆ ಕೇಂದ್ರ ಸರ್ಕಾರ ನೀಡಿದ್ದ ಭರವಸೆಯನ್ನು ಈಡೇರಿಸದಿದ್ದ ಕಾರಣ ತೆಲಂಗಾಣ ಹೋರಾಟ ಆರಂಭವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.