ಈಗಿನ ಸುದ್ದಿ

ಪ್ರಧಾನಿ ಅಭ್ಯರ್ಥಿ: ಬಿಜೆಪಿಯಲ್ಲಿ ನಾಯಕರಿಗೆ ಕೊರತೆಯಿಲ್ಲ

Published On :

ಪಣಜಿ: 2014ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಸಜ್ಜಾಗಿದ್ದು, ಪಕ್ಷದಲ್ಲಿ ನಾಯಕರಿಗೆ ಅಭಾವವಿಲ್ಲದಿರುವುದರಿಂದ ಪ್ರಧಾನಿ ಆಯ್ಕೆ ಕಷ್ಟವಾಗುವುದಿಲ್ಲ ಎಂದು ಹಿರಿಯ ನಾಯಕ ವೆಂಕಯ್ಯನಾಯ್ಡು ಹೇಳಿದ್ದಾರೆ.

ಬಿಜೆಪಿಯಲ್ಲಿ ನಾಯಕರಿಗೆ ಕೊರತೆಯಿಲ್ಲ, ಅಡ್ವಾಣಿ, ಸುಷ್ಮಾ ಸ್ವರಾಜ್, ನಾನು ಸೇರಿದಂತೆ ನಮ್ಮ ಪಕ್ಷದ ಇತರೆ ನಾಯಕರು ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ನಾಯಕ. ಅವರಿಗೆ ಪ್ರಧಾನಿ ಆಗುವ ಎಲ್ಲಾ ಗುಣಗಳು ಇವೆ. ಆದರೆ ಪಕ್ಷ ಪ್ರಧಾನಿ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಸಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಬಿಜೆಪಿ ಆಡಳಿತದ ಬಗ್ಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿರುವುದರಿಂದ, ಜನತೆ ಬಿಜೆಪಿಯನ್ನೇ ಮತ್ತೇ ಅಧಿಕಾರಕ್ಕೆ ತರಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.