ಈಗಿನ ಸುದ್ದಿ

13 ಶಾಸಕರ ರಾಜಿನಾಮೆಯಿಂದ ಸರ್ಕಾರಕ್ಕೆ ಧಕ್ಕೆಯಿಲ್ಲ: ಸಿಎಂ ಶೆಟ್ಟರ್

13 ಶಾಸಕರ ರಾಜಿನಾಮೆಯಿಂದ ಸರ್ಕಾರಕ್ಕೆ ಧಕ್ಕೆಯಿಲ್ಲ: ಸಿಎಂ ಶೆಟ್ಟರ್
Published On :

ಬೆಂಗಳೂರು: 13 ಶಾಸಕರ ರಾಜಿನಾಮೆಯಿಂದ ಬಿಜೆಪಿ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬುಧವಾರ ಹೇಳಿದ್ದಾರೆ.

ಇಂದು ನಗರದಲ್ಲಿ 13 ಬಿಜೆಪಿ ಶಾಸಕರ ರಾಜಿನಾಮೆ ಅಂಗೀಕಾರವಾದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಶೆಟ್ಟರ್, ಸರ್ಕಾರಕ್ಕೆ ಸರಳ ಬಹುಮತ ಇದೆ. ರಾಜಿನಾಮೆಯಿಂದ ಯಾವುದೇ ಧಕ್ಕೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಫೆಬ್ರುವರಿ 4ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರುವರಿ 8ರಂದು ತಾವು ಬಜೆಟ್ ಮಂಡಿಸುವುದಾಗಿ ಶೆಟ್ಟರ್ ತಿಳಿಸಿದರು.

ಕೆಜೆಪಿ ಬೆಂಬಲಿತ 13 ಬಿಜೆಪಿ ಶಾಸಕರ ಪ್ರತಿಭಟನೆಗೆ ಮಣಿದ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ನಿನ್ನೆ 13 ಶಾಸಕರ ರಾಜಿನಾಮೆಯನ್ನು ಅಂಗೀಕರಿಸಿದ್ದರು.

ಈ ಶಾಸಕರ ರಾಜಿನಾಮೆಯೊಂದಿಗೆ ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಕುಸಿದಿದ್ದರೂ ಸದ್ಯಕ್ಕೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ. ಆದರೂ ಮುಂದಿನ ಅವರ ಆಡಳಿತ ಹಗ್ಗದ ಮೇಲಿನ ನಡಿಗೆಯಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.