ಈಗಿನ ಸುದ್ದಿ

ಕೇಂದ್ರ ಸರ್ಕಾರದ ಲೋಕಪಾಲ ಮಸೂದೆಗೆ ಅಣ್ಣಾ ವಿರೋಧ

Published On :

ಪಾಟ್ನಾ: ಲೋಕಪಾಲ ಮಸೂದೆಯಲ್ಲಿ ತಿದ್ದುಪಡಿ ಮಾಡಲಾಗಿದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ ನಟಿಸುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹೇಳಿದ್ದಾರೆ.

ಕೇಂದ್ರ ಸಚಿವ ಸಂಪುಟದಲ್ಲಿ ಅಂಗೀಕಾರವಾದ ಪರಿಷ್ಕೃತ ಲೋಕಪಾಲ ಮಸೂದೆಗೆ ಗುರುವಾರ ವಿರೋಧ ವ್ಯಕ್ತಪಡಿಸಿರುವ ಅಣ್ಣಾ ಹಜಾರೆ, ಕೇಂದ್ರ ಸರ್ಕಾರ ತಿದ್ದುಪಡಿ ಹೆಸರಲ್ಲಿ ನಾಟಕವಾಡುತ್ತಿದೆ ಎಂದು ದೂರಿದ್ದಾರೆ.

ಯುಪಿಎ ಸರ್ಕಾರ ಶಾಸಾಂಗದ ದುರ್ಬಲ ಅಧಿನಿಯಮವನ್ನು ಬಳಸಿಕೊಂಡು, ತಿದ್ದುಪಡಿ ತರಲಾಗಿದೆ ಎಂದು ನಟಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಪ್ರಬಲ ಲೋಕಪಾಲ ಮಸೂದೆ ಜಾರಿ ಮಾಡುತ್ತೇವೆ ಎಂದು ಹೇಳುವ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಯುಪಿಎ ಸರ್ಕಾರದ ಯಾವುದೇ ವಿಶ್ವಾಸ ಇಟ್ಟುಕೊಂಡಿಲ್ಲ ಎಂದು ಹಜಾರೆ ವಿಷಾಧಿಸಿದ್ದಾರೆ.

ಸೋನಿಯಾ ಗಾಂಧಿ ಮತ್ತು ಪ್ರಧಾನಿ ಅವರು ಭ್ರಷ್ಟಾಚಾರ ನಿಗ್ರಹಿಸುವಂತಹ ಗುರಿ ಹೊಂದಿಲ್ಲ. ಸತತ ಎರಡು ವರ್ಷಗಳಿಂದ ತಿದ್ದುಪಡಿ ಮಾಡಲಾಗುತ್ತದೆ ಎಂದು ಹೇಳಿ ನಟಿಸುತ್ತಿದ್ದಾರೆ ಹೊರತು, ಪ್ರಬಲ ಲೋಕಪಾಲ ಮಸೂದೆ ಜಾರಿಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಆಪಾದಿಸಿದ್ದಾರೆ.

ಪರಿಷ್ಕೃತ ಲೋಕಪಾಲ ಮಸೂದೆ ಅಂಗೀಕಾರ ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶದ ಜನರನ್ನು ಮೂರ್ಖರನ್ನಾಗಿಸಲು ಹೊರಟಿದೆ ಎಂದ ಅವರು, ಕೇಂದ್ರ ಸರ್ಕಾರದ ಈ ನಿಲುವಿನ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಜಾಗೃತಿ ಕಾರ್ಯಕ್ರಮ ನಡೆಸಲಿದ್ದು, ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದೇನೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.