ಅತ್ಯಾಚಾರಕ್ಕೊಳಗಾದವರಿಗೆ ಚಿಕಿತ್ಸೆ ನೀಡಬೇಕು: ಖಾಸಗಿ ಆಸ್ಪತ್ರೆಗಳಿಗೆ ಸೂಚನೆ
ನವದೆಹಲಿ: ಅತ್ಯಾಚಾರ ಮತ್ತು ರಸ್ತೆ ಅಪಘಾತಕ್ಕೀಡಾದವರಿಗೆ ಚಿಕಿತ್ಸೆ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ದೆಹಲಿ ಸರ್ಕಾರ ಸೂಚಿಸಬೇಕು ಎಂದು ಹೈ ಕೋರ್ಟ್ ಗುರುವಾರ ಆದೇಶಿಸಿದೆ.
ಗ್ಯಾಂಗ್ ರೇಪ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಅತ್ಯಾಚಾರಕ್ಕೊಳಗಾದವರನ್ನು ಹಾಗೂ ರಸ್ತೆ ಅಪಘಾತಕ್ಕೀಡಾದವರಿಗೆ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸುತ್ತಾವೆ ಎಂದು ದೂರು ಬಂದ ಹಿನ್ನಲೆಯಲ್ಲಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಖಾಸಗಿ ಆಸ್ಪತ್ರೆಗಳು ಅಪಘಾತಕ್ಕೀಡಾದವರನ್ನಾ ದಾಖಲಿಸಿಕೊಳ್ಳಲು ನಿರಾಕರಿಸುವುದು ಹೆಚ್ಚಾಗಿರುತ್ತದೆ. ಘಟನಾ ಸ್ಥಳದಿಂದ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ಕೊಂಡುಯ್ಯುವಷ್ಟರಲ್ಲಿ ಅವರು ಅಸುನೀಗಿರುತ್ತಾರೆ ಎಂದು ದೂರ ಸಲ್ಲಿಸಲಾಗಿತ್ತು.
ಇನ್ನೂ ಮುಂದೆ ನಗರದ ಎಲ್ಲಾ ಖಾಸಗಿ ಆಸ್ಪತ್ರೆಗಳು ಅಪಘಾತಕ್ಕೀಡಾದವರನ್ನಾ ಮತ್ತು ಅತ್ಯಾಚಾರಕ್ಕೊಳಗಾದವರನ್ನು ಕೂಡಲೇ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ದೆಹಲಿ ನ್ಯಾಯಾಲಯ ಆದೇಶಿದೆ. ಈ ಬಗ್ಗೆ ದೆಹಲಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

