ಈಗಿನ ಸುದ್ದಿ

ಹಿಂದಿ ಭಾಷಾಂತರದ 'ವಿಶ್ವರೂಪಂ' ಚಿತ್ರ ಬಿಡುಗಡೆ: ಸಾಧಾರಣ ಪ್ರತಿಕ್ರಿಯೆ

Published On :

ನವದೆಹಲಿ: ಹಿಂದಿಗೆ ಭಾಷಾಂತರಗೊಂಡಿರುವ ಕಮಲ್ ಹಾಸನ್ ಅಭಿನಯದ ವಿಶ್ವರೂಪಂ ಚಿತ್ರ ಇಂದು ಬಿಡುಗಡೆಯಾಗಿದ್ದು, ಸಾಧಾರಣ ಪ್ರತಿಕ್ರಿಯೆ ದೊರೆತಿದೆ.

ದೆಹಲಿ, ಪಂಜಾಬ್ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಯಾವುದೇ ಅಡೆತಡೆಗಳಿಲ್ಲದೆ ಚಿತ್ರ ಬಿಡುಗಡೆಯಾಗಿದ್ದು, ಸಾಮಾನ್ಯ ಪ್ರತಿಕ್ರಿಯೆ ದೊರೆತಿದೆ. ಶಾಂತಿಯುತವಾಗಿ ಚಿತ್ರ ಬಿಡುಗಡೆಯಾಗಿದ್ದು ಯಾವುದೇ ವಿರೋಧ ವ್ಯಕ್ತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶ, ಮುಂಬೈ ಸಿನಿಮಾ ಮಂದಿರಗಳಲ್ಲಿ ಚಿತ್ರ ಬಿಡುಗಡೆಗೆ ಬಿಗಿ ಬಂದೋಭಸ್ತ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ವಿಶ್ವರೂಪಂ ಚಿತ್ರಕ್ಕೆ ಸಾಧರಾಣ ಪ್ರತಿಕ್ರಿಯೆ ಬಂದಿದ್ದು, ವಾರದಂತ್ಯದೊಳಗೆ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ ಎಂದು ನಿರ್ದೇಶಕ ಅನಂತ್ ವರ್ಮಾ ಹೇಳಿದ್ದಾರೆ.

ತಮಿಳನಾಡು ಸರ್ಕಾರ ವಿಶ್ವರೂಪಂ ಚಿತ್ರ ಬಿಡುಗಡೆಗೆ  ನಿಷೇಧವೇರಿತ್ತು. ಇದನ್ನು ಪ್ರಶ್ನಿಸಿ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ವಿಶ್ವರೂಪಂ ಚಿತ್ರ ಬಿಡುಗಡೆಗೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗಿಯ ಪೀಠ ಮುಂದಿನ ಆದೇಶದವರೆಗೆ ಚಿತ್ರದ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಿ, ವಿಚಾರಣೆಯನ್ನು ಫೆಬ್ರವರಿ 4ಕ್ಕೆ ಮುಂದೂಡಿದೆ.

ಈ ಸಂಬಂಧ ಕಮಲ್ ಹಾಸನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.