ಭಾರತ ಅನಾಥಾಲಯವಲ್ಲ: ಖುರ್ಷಿದ್
ಬ್ರೂನೆ: ಅಮೆರಿಕ ಸರ್ಕಾರದಲ್ಲಿನ ಮಾಜಿ ಗುತ್ತಿಗೆದಾರ ಎಡ್ವರ್ಡ್ ಸ್ನೋಡೆನ್ ಭಾರತದಲ್ಲಿ ರಾಜಕೀಯ ಆಶ್ರಯ ಬೇಡಿದ್ದಾರೆ ಎಂಬ ಸುದ್ದಿ ಬಗ್ಗೆ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್, ಭಾರತ ಅನಾಥಾಲಯವಲ್ಲ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಖುರ್ಷಿದ್, ನನಗೆ ಸ್ನೋಡೆನ್ ಭಾರತದಲ್ಲಿ ರಾಜಕೀಯ ಆಶ್ರಯ ನೀಡಬೇಕೆಂದು ಸಲ್ಲಿಸಿರುವ ವಿನಂತಿ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.
ಸ್ನೋಡೆನ್ ಅವರು ತನಗೆ ರಾಜಕೀಯ ಆಶ್ರಯ ನೀಡಬೇಕೆಂದು ಭಾರತ ಸೇರಿದಂತೆ 20 ದೇಶಗಳಿಗೆ ವಿನಂತಿ ಸಲ್ಲಿಸಿರುವುದರ ಬಗ್ಗೆ ವಿಕಿಲೀಕ್ಸ್ ಬಹಿರಂಗ ಪಡಿಸಿದ ನಂತರ ಖುರ್ಷಿದ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಆದಾಗ್ಯೂ, ಮಾಧ್ಯಮದವರೊಂದಿಗೆ ಈ ಬಗ್ಗೆ ಹೆಚ್ಚಿನ ವಿಷಯಗಳನ್ನು ಮಾತನಾಡಲು ಖುರ್ಷಿದ್ ನಿರಾಕರಿಸಿದ್ದಾರೆ.
ಈ ಹಿಂದೆ ಭಾರತ ಹಲವಾರು ಜನರಿಗೆ ಆಶ್ರಯ ನೀಡಿದೆ. ಆದರೆ ಈಗ ಯಾರಿಗಾದರೂ ಆಶ್ರಯ ನೀಡಬೇಕಾದರೆ ನಾವು ತುಂಬಾ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.
ಖುರ್ಷಿದ್ ಅವರ ಈ ಹೇಳಿಕೆಯಿಂದಾಗಿ, ಸ್ನೋಡೆನ್ ಅವರ ವಿನಂತಿಯನ್ನು ಭಾರತ ಸ್ವೀಕರಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ.
ಇದೀಗ ಸ್ನೋಡೆನ್ ಅವರು ಮಾಸ್ಕೋ ವಿಮಾನ ನಿಲ್ದಾಣದ ಟ್ರಾನ್ಸಿಟ್ ವಲಯದಲ್ಲಿ ತಂಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

