ಜಾರ್ಖಂಡ್: ಸರ್ಕಾರ ರಚನೆಗೆ ಕಾಂಗ್ರೆಸ್, ಜೆಎಂಎಂ ಸಮಾಲೋಚನೆ
ರಾಂಚಿ: ಜುಲೈ 18ಕ್ಕೆ ಜಾರ್ಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆ ಕೊನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ನೂತನ ಸರ್ಕಾರ ರಚಿಸುವ ಬಗ್ಗೆ ಜೆಎಂಎಂ ಮತ್ತು ಕಾಂಗ್ರೆಸ್ ಪಕ್ಷಗಳು ಸಮಾಲೋಚನೆ ನಡೆಸಿವೆ.
ಈ ಬಗ್ಗೆ ಉಭಯ ಪಕ್ಷಗಳು ಮಂಗಳವಾರ ಸಭೆ ಸೇರಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಶಕೀಲ್ ಅಹ್ಮದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಬಿ.ಕೆ ಹರಿಪ್ರಸಾದ್, ಜಿಪಿಸಿಸಿ ಅಧ್ಯಕ್ಷ ಸುಖ್ದಿಯೋ ಭಗತ್, ಸಿಎಲ್ಪಿ ನಾಯಕ ಆರ್. ಪಿ ಸಿಂಗ್, ಜೆಎಂಎಂ ನಾಯಕ ಶಿಬು ಸೊರೇನ್ ಮತ್ತು ಅವರ ಪುತ್ರ ಹೇಮಂತ್ ಸಭೆಯಲ್ಲಿ ಭಾಗಿಯಾಗಿದ್ದರು.
ಸರ್ಕಾರ ರಚನೆ ಬಗ್ಗೆ ಸಮಾಲೋಚನೆ ನಡೆಸಲು ಶಿಬುಸೊರೇನ್ ಮತ್ತು ಹೇಮಂತ್ ಸೊರೇನ್ರನ್ನು ಕರೆಯಲಾಗಿದೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ ಹೇಳಿದ್ದಾರೆ.
ಜೆಎಂಎಂ ಜತೆ ಮಾತುಕತೆ ನಡೆಸಲು ಪ್ರಸಾದ್ ಸೇರಿದಂತೆ ಕೆಲವೊಂದು ನಾಯಕರು ದೆಹಲಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ನೇತಾರ ಅಹ್ಮದ್ ಹೇಳಿದ್ದಾರೆ.
ಅದೇ ವೇಳೆ ಸರ್ಕಾರ ರಚನೆಗಾಗಿ ಆರ್ಜೆಡಿ ಮತ್ತು ಕೆಲವು ಸ್ವತಂತ್ರ ಶಾಸಕರ ಬೆಂಬಲ ಪಡೆಯುವುದಾಗಿ ಕಾಂಗ್ರೆಸ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

