ಈಗಿನ ಸುದ್ದಿ

ಸುಜಾತ ಸಿಂಗ್ ಮುಂದಿನ ವಿದೇಶಾಂಗ ಕಾರ್ಯದರ್ಶಿ

ಸುಜಾತ ಸಿಂಗ್ ಮುಂದಿನ ವಿದೇಶಾಂಗ ಕಾರ್ಯದರ್ಶಿ
Published On :

ನವದೆಹಲಿ: ಜರ್ಮನಿಯಲ್ಲಿ ಭಾರತೀಯ ರಾಯಭಾರಿಯಾಗಿರುವ ಸುಜಾತ ಸಿಂಗ್ ಅವರು ಭಾರತದ ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸುಜಾತ ಅವರನ್ನು ನೂತನ ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವುದಕ್ಕೆ ಮಂಗಳವಾರ ಒಪ್ಪಿಗೆ ಸೂಚಿಸಿದ್ದಾರೆ.

59 ವರ್ಷದ ಸಿಂಗ್ ಅವರು 1976ರ ಬ್ಯಾಚ್‌ನ ಐಎಫ್‌ಎಸ್ ಅಧಿಕಾರಿಯಾಗಿದ್ದು, ವಿದೇಶಾಂಗ ಕಾರ್ಯದರ್ಶಿಯಂತಹ ಪ್ರಮುಖ ಹುದ್ದೆಯ ಆಕಾಂಕ್ಷಿಯಾಗಿದ್ದರು. ಇನ್ನು ಚೀನಾದಲ್ಲಿ ಭಾರತೀಯ ರಾಯಭಾರಿಯಾಗಿರುವ ಸುಜಾತ ಸಿಂಗ್ ಅವರ ಜ್ಯುನಿಯರ್ ಎಸ್.ಜೈಶಂಕರ್ ಅವರು ಸಹ ಪ್ರಮುಖ ಆಕಾಂಕ್ಷಿಯಾಗಿದ್ದರು. ಆದರೆ ಅಂತಿಮವಾಗಿ ಸಿಂಗ್ ಅವರು ನೇಮಕಗೊಂಡಿದ್ದಾರೆ.

ಈಗ ವಿದೇಶಾಂಗ ಕಾರ್ಯದರ್ಶಿಯಾಗಿರುವ ರಂಜನ್ ಮಥಾಯಿ ಅವರು ಇದೇ ತಿಂಗಳು 31ಕ್ಕೆ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸುಜಾತ ಸಿಂಗ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈ ಮೂಲಕ ಚೋಕಿಲ ಐಯ್ಯರ್ ಮತ್ತು ನಿರುಪಮಾ ರಾವ್ ನಂತರ ಸುಜಾತ ಸಿಂಗ್ ಅವರು ವಿದೇಶಾಂಗ ಸೇವೆಗೆ ಆಯ್ಕೆಯಾದ ಮೂರನೇ ಮಹಿಳೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.