ಆಹಾರ ಭದ್ರತಾ ಮಸೂದೆ 'ರಾಜಕೀಯ ಗಿಮಿಕ್': ಬಿಜೆಪಿ

ನವದೆಹಲಿ: ಸೋನಿಯಾ ಗಾಂಧಿ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಆಹಾರ ಭದ್ರತಾ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಅನುಷ್ಠಾನಕ್ಕೆ ಮುಂದಾಗಿರುವ ಯುಪಿಎ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು, ಇದು ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಮಾಡುತ್ತಿರುವ 'ರಾಜಕೀಯ ಗಿಮಿಕ್' ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.
ಮಸೂದೆಗೆ ಸುಗ್ರೀವಾಜ್ಞೆ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಸಿಂಗ್, ಇಂತಹ ಪ್ರಮುಖ ಮಸೂದೆಯ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಚರ್ಚೆ ಮಾಡದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರದಲ್ಲೇ ಇರುವುದರಿಂದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕೆಲವು ಜನಪ್ರಿಯ ಕಾರ್ಯಕ್ರಮಗಳನ್ನು ಪ್ರಕಟಿಸಲು ಮುಂದಾಗಿದೆ. ಅದರಲ್ಲಿ ಆಹಾರ ಭದ್ರತಾ ಮಸೂದೆಯೂ ಒಂದು ಎಂದು ರಾಜನಾಥ್ ಸಿಂಗ್ ಹೇಳಿದರು.
ಆಹಾರ ಭದ್ರತಾ ಮಸೂದೆ ಬಗ್ಗೆ ಯಾವುದೇ ಚರ್ಚೆ ಮಾಡದೇ ಸುಗ್ರೀವಾಜ್ಞೆ ಮೂಲಕ ತರಾತುರಿಯಲ್ಲಿ ಜಾರಿಗೊಳಿಸುತ್ತಿರುವುದು ಕೇವಲ ರಾಜಕೀಯ ಉದ್ದೇಶಕ್ಕಾಗಿ ಮಾತ್ರ ಎಂದು ಸಿಂಗ್ ಆರೋಪಿಸಿದರು.
ಕಳೆದ 9 ವರ್ಷಗಳಲ್ಲಿ ಮಸೂದೆ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಪ್ರಸ್ತಾಪ ಮಾಡದೇ ಈಗ ಇದ್ದಕ್ಕಿದ್ದಂತೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ಮುಂದಾಗಿರುವುದು ಅಚ್ಚರಿ ಮೂಡಿಸಿದೆ. ಆಹಾರ ಭದ್ರತಾ ಮಸೂದೆ ಅಂಗೀಕಾರಕ್ಕೆ ನಮ್ಮ ಸಮ್ಮತಿ ಇದೆ. ಆದರೆ ಆ ಮಸೂದೆಯಲ್ಲಿ ಕೆಲವು ತಿದ್ದುಪಡಿಗಳಾಗಬೇಕು. ಹೀಗಾಗಿ ಮಸೂದೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


