ಈಗಿನ ಸುದ್ದಿ

ಚೌಟಾಲ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

Published On :

ನವದೆಹಲಿ: ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮ ಪ್ರಕರಣ ಸಂಬಂಧ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಹರಿಯಾಣ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ಅವರ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 22ರವರೆಗೆ ವಿಸ್ತರಿಸಿ ದೆಹಲಿ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಅನಾರೋಗ್ಯದ ಕಾರಣದಿಂದ ಅವಧಿ ವಿಸ್ತರಣೆ ಕೋರಿ ಚೌಟಾಲ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ಧರಾರ್ಥ್ ಮೃದುಲಾ ಅವರು, ಜುಲೈ 22ರ ವರೆಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿದ್ದಾರೆ.

ಮೇ 21ರಂದು ದೆಹಲಿ ಹೈಕೋರ್ಟ್ ಚೌಟಾಲ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಆ ಜಾಮೀನು ಅವಧಿ ಇಂದಿಗೆ ಅಂತ್ಯಗೊಂಡಿತ್ತು.

2000ನೇ ಇಸವಿಯಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಚೌಟಾಲ ಹಾಗೂ ಅವರ ಪುತ್ರ ಅಜಯ್ ಚೌಟಾಲ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ವಿಶೇಷ ಸಿಬಿಐ ಕೋರ್ಟ್ ಜನವರಿ 22ರಂದು ತೀರ್ಪು ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.