ಈಗಿನ ಸುದ್ದಿ

ಮಂಡೇಲಾಗೆ ಕೃತಕ ಉಸಿರಾಟ ಅಳವಡಿಕೆ

ಮಂಡೇಲಾಗೆ ಕೃತಕ ಉಸಿರಾಟ ಅಳವಡಿಕೆ
Published On :

ಜೊಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ಅವರಿಗೆ ಕೃತಕ ಉಸಿರಾಟವನ್ನು ಅಳವಡಿಸಲಾಗಿದೆ ಎಂದು ಮಂಡೇಲಾ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಜೀವರಕ್ಷಕ ಸಾಧನದ ಮೂಲಕವೇ ಮಂಡೇಲಾ ಅವರು ಉಸಿರಾಡುತ್ತಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿರುವುದಾಗಿ ಝಿನುವಾ ಸುದ್ದಿಸಂಸ್ಥೆ ವರದಿ ಮಾಡಿದೆ.

ಮಂಡೇಲಾ ಅವರ ಆರೋಗ್ಯದ ಸ್ಥಿತಿಗತಿ ಕುರಿತು ಅವರ ಕುಟುಂಬದ ಸದಸ್ಯರು ಇಸ್ಟರ್ನ್ ಕೇಪ್ ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಮಂಡೇಲಾ ಅವರನ್ನು ಕಳೆದ ಜೂನ್ 8ರಂದು ಪ್ರಿಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜೂನ್ 23ರಿಂದ ಮಂಡೇಲಾ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.