ಈಗಿನ ಸುದ್ದಿ

ಬಿಎಂಟಿಸಿ ಟಿಕೆಟ್ ದರದಲ್ಲಿ 1 ರು. ಇಳಿಕೆ

ಬಿಎಂಟಿಸಿ ಟಿಕೆಟ್ ದರದಲ್ಲಿ 1 ರು. ಇಳಿಕೆ
Published On :

ಬೆಂಗಳೂರು: ನಷ್ಟದ ನಡುವೆಯೂ ಪ್ರಮಾಣಿಕರ ಮೇಲಿನ ಹೊರೆಯನ್ನು ಕೊಂಚ ಕಡಿಮೆ ಮಾಡಲು ಮುಂದಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ಟಿಕೆಟ್ ದರದಲ್ಲಿ 1 ರುಪಾಯಿ ಕಡಿತಗೊಳಿಸಿದೆ.

ಈ ದರ ಕಡಿತ ಕೇವಲ ಮೊದಲನೆ ಸ್ಟೇಜ್ಗೆ ಮಾತ್ರ ಸೀಮಿತವಾಗಿದ್ದು, ಮೊದಲನೆ ಸ್ಟೇಜ್ಗೆ ಈ ಮುಂಚೆ 5 ರುಪಾಯಿ ಇದ್ದ ಟಿಕೆಟ್ ದರವನ್ನು 6 ರುಪಾಯಿಗೆ ಏರಿಸಲಾಗಿತ್ತು. ಇದೀಗ ಮತ್ತೆ 1 ರುಪಾಯಿ ಇಳಿಕೆ ಮಾಡುವ ಮೂಲಕ 5 ರುಪಾಯಿ ನಿಗದಿ ಮಾಡಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಈ ನೂತನ ದರ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಇತ್ತೀಚಿಗಷ್ಟೆ ಡೀಸೆಲ್ ದರ ಏರಿಕೆ ಹಾಗೂ ಸಿಬ್ಬಂದಿಯ ವೇತನ ಹೆಚ್ಚಳದ ಹಿನ್ನೆಲೆಯಲ್ಲಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಪ್ರಯಾಣ ದರವನ್ನು ಹೆಚ್ಚಳ ಮಾಡಲಾಗಿತ್ತು. ಕೆಎಸ್‌ಆರ್‌ಟಿಸಿಯ ವೇಗದೂತ ಹಾಗೂ ರಾಜಹಂಸ ಬಸ್‌ಗಳಲ್ಲಿ ಶೇ.10ರಷ್ಟು ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಶೇ.16ರಷ್ಟು ಹೆಚ್ಚಳ ಮಾಡಲಾಗಿತ್ತು. ಇಷ್ಟಾದರೂ ಬಿಎಂಟಿಸಿ ಕೋಟ್ಯಾಂತರ ರುಪಾಯಿ ನಷ್ಟ ಅನುಭವಿಸುತ್ತಿದೆ ಮತ್ತು 450 ಕೋಟಿ ರುಪಾಯಿ ಸಾಲದಲ್ಲಿದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.