ಈಗಿನ ಸುದ್ದಿ

ಬಜೆಟ್‌ನಲ್ಲಿ ಪ್ರಣಾಳಿಕೆಯ ಅಂಶಗಳನ್ನು ಅಳವಡಿಸಿಕೊಳ್ಳಿ: ಸಿಎಂಗೆ ಪರಮೇಶ್ವರ ಪತ್ರ

ಬಜೆಟ್‌ನಲ್ಲಿ ಪ್ರಣಾಳಿಕೆಯ ಅಂಶಗಳನ್ನು ಅಳವಡಿಸಿಕೊಳ್ಳಿ: ಸಿಎಂಗೆ ಪರಮೇಶ್ವರ ಪತ್ರ
Published On :

ಬೆಂಗಳೂರು:  ಮುಂದಿನ ವಾರ ಮಂಡನೆಯಾಗಲಿರುವ ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಅಳವಡಿಸಿಕೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಪತ್ರ ಬರೆದಿದ್ದಾರೆ.

ಲೋಕಸಭೆ ಚುನಾವಣೆ ಹತ್ತಿರದಲ್ಲೇ ಇರುವುದರಿಂದ ಮತ್ತು ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಮೇಲೆ ಬಹಳಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಹೀಗಾಗಿ ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನಾವು ಜನತೆಗೆ ನೀಡಿರುವ ಭರವಸೆಗಳನ್ನು ಹಂತ ಹಂತವಾಗಿ ಎಲ್ಲವನ್ನೂ ಈಡೇರಿಸುವಂತೆ ಪರಮೇಶ್ವರ ಆಗ್ರಹಿಸಿದ್ದಾರೆ.

ಆದ್ಯತೆ ಮೇರೆಗೆ ಪ್ರಣಾಳಿಕೆಯ ಅಂಶಗಳನ್ನು ಜಾರಿಗೆ ತನ್ನಿ. ಜೊತೆಗೆ ಸೋತ ಕ್ಷೇತ್ರಗಳಿಗೂ ಪ್ರಾತಿನಿಧ್ಯ ನೀಡಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 102 ಸ್ಥಾನಗಳಲ್ಲಿ ಸೋತಿದ್ದು, ಆ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಿ ಮತ್ತು ಅಲ್ಲಿ ಸೋತ ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಪರಮೇಶ್ವರ ತಮ್ಮ ಪತ್ರದ ಮೂಲಕ ಸಿಎಂಗೆ ಸಲಹೆ ನೀಡಿದ್ದಾರೆ. ಅಲ್ಲದೆ ಚುನಾವಣಾ ಪ್ರಣಾಳಿಕೆಯ ಪ್ರತಿಯನ್ನು ಸಹ ಸಿಎಂ ಅವಗಾಹನೆಗಾಗಿ ಪರಮೇಶ್ವರ ಅವರು ತಮ್ಮ ಪತ್ರದೊಂದಿಗೆ ಲಗತ್ತಿಸಿದ್ದಾರೆ.

ಇನ್ನು ಪರಮೇಶ್ವರ ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಭಿವೃದ್ಧಿ ವಿಚಾರದಲ್ಲಿ ಸೋತಿರುವ ಕ್ಷೇತ್ರ, ಗೆದ್ದಿರುವ ಕ್ಷೇತ್ರ ಎಂಬ ತಾರತಮ್ಯ ಮಾಡುವುದಿಲ್ಲ. ಸಮಗ್ರ ಕರ್ನಾಟಕ ಅಭಿವೃದ್ಧಿಯೇ ನಮ್ಮ ಗುರಿ ಎಂದು ಹೇಳಿದ್ದಾರೆ. ಅಲ್ಲದೆ ಕೆಪಿಸಿಸಿ ಅಧ್ಯಕ್ಷರ ಪತ್ರ ತಮಗೆ ಇನ್ನು ತಲುಪಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನ ಕಬಿನಿ ಡ್ಯಾಂನಲ್ಲಿ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬಜೆಟ್‌ನಲ್ಲಿ ಎಲ್ಲ ಕ್ಷೇತ್ರಗಳಿಗೂ ಸಮಾನ ಆದ್ಯತೆ ನೀಡಲಾಗುವುದು. ಆದರೆ ನೀರಾವರಿಗೆ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.