ಶೀಘ್ರವೇ ರಾಮ ಮಂದಿರ ನಿರ್ಮಾಣ: ಬಿಜೆಪಿ

ಅಯೋಧ್ಯಾ: 2014ರ ಲೋಕಸಭೆ ಚುನಾವಣೆಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ, ಈ ಬಾರಿಯೂ ರಾಮ ಮಂದಿರ ನಿರ್ಮಾಣದ ಜಪ ಮಾಡಲು ಶುರು ಮಾಡಿದೆ.
ಶೀಘ್ರದಲ್ಲೇ ನಮ್ಮ ಪಕ್ಷ ರಾಮ ಮಂದಿರವನ್ನು ನಿರ್ಮಾಣ ಮಾಡಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರಪ್ರದೇಶ ಉಸ್ತುವಾರಿ, ಮೋದಿ ಆಪ್ತ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.
ಇಂದು ಅಯೋಧ್ಯಯ ರಾಮ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾ, ರಾಮನಿಗೆ ಪ್ರಾರ್ಥನೆ ಸಲ್ಲಿಸಲು ನಾನು ಇಲ್ಲಿಗೆ ಆಗಮಿಸಿದ್ದೇನೆ ಮತ್ತು ಆದಷ್ಟು ಬೇಗ ರಾಮ ಮಂದಿರ ನಿರ್ಮಾಣ ಮಾಡುವುದು ನಮ್ಮ ಕನಸು ಎಂದರು.
ಅಲ್ಲದೆ ಕಾಂಗ್ರೆಸ್ ಮುಕ್ತ ದೇಶ ನಿರ್ಮಾಣ ಹಾಗೂ ಉತ್ತಮ ಸರ್ಕಾರಕ್ಕಾಗಿ ತಾವು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಅಮಿತ್ ಶಾ ತಿಳಿಸಿದರು. ಆದರೆ ಇದೇ ವೇಳೆ ಇಶ್ರತ್ ಜಹಾನ್ ಎನ್ಕೌಂಟರ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಶಾ ನಿರಾಕರಿಸಿದರು.
ಇನ್ನು ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಯು ಮುಖ್ಯಸ್ಥ ಶರದ್ ಯಾದವ್ ಅವರು, ಮೊದಲು ಕಾನೂನು ಮೂಲಕವೋ ಅಥವಾ ಸಂಧಾನದ ಮೂಲಕವೋ ರಾಮ ಮಂದಿರ ವಿವಾದವನ್ನು ಪರಿಹರಿಸಿಕೊಳ್ಳಲಿ. ನಂತರ ಅಮಿತ್ ಶಾ ಏನು ಬೇಕಾದರೂ ಹೇಳಿಕೊಳ್ಳಲಿ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


