ಈಗಿನ ಸುದ್ದಿ

ಉತ್ತರಾಖಂಡ: ರಕ್ಷಣಾ ಕಾರ್ಯಗಳಿಗೆ ಮಳೆ ಅಡ್ಡಿ

Published On :

ಡೆಹ್ರಾಡೂನ್: ಉತ್ತರಾಖಂಡದ ಪ್ರಳಯ ಪೀಡಿತ ಪ್ರದೇಶಗಳಾದ ರುದ್ರಪ್ರಯಾಗ್, ಚಮೋಲಿ ಮತ್ತು ಉತ್ತರಕಾಶಿ ಜಿಲ್ಲೆಗಳಲ್ಲಿ ಶನಿವಾರ ಭಾರೀ ಮಳೆ ಸುರಿದ ಪರಿಣಾಮ ರಕ್ಷಣಾಕಾರ್ಯಗಳಿಗೆ ಅಡ್ಡಿಯುಂಟಾಗಿದೆ.

ಪ್ರಸ್ತುತ ಪ್ರದೇಶಗಳಿಗೆ ಹೆಲಿಕಾಪ್ಟರ್ ಮೂಲಕ ಆಹಾರ ಸಾಮಾಗ್ರಿಗಳನ್ನು ಸಾಗಿಸಿ ನೆರವು ನೀಡುತ್ತಿದ್ದರೂ, ಮಳೆಯಿಂದಾಗಿ ಹೆಲಿಕಾಪ್ಟರ್ ಹಾರಾಟ ಅಸಾಧ್ಯವಾಗಿದೆ.

ಉತ್ತರಕಾಶಿ ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯಾಗಿದ್ದು, ಭಾಗೀರಥಿ ನದಿ ಮೈತುಂಬಿ ಹರಿಯುತ್ತಿದೆ. ಈ ನದಿಯ ದಡದಲ್ಲಿ ವಾಸವಾಗಿರುವ ಜನರನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ಭರದಿಂದ ಸಾಗಿದೆ.

ರುದ್ರಪ್ರಯಾಗ ಜಿಲ್ಲೆಯಲ್ಲಿರುವ ಕೇದಾರ್‌ಘಾಟಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ನೆರವು ಸಾಮಾಗ್ರಿಗಳನ್ನು ಸಾಗಿಸಲು ಕಷ್ಟವಾಗುತ್ತಿದೆ ಎಂದು ಜಿಲ್ಲಾ ಮೆಜಿಸ್ಟ್ರೇಟ್ ದಿಲೀಪ್ ಜವಾಲ್ಕರ್ ಹೇಳಿದ್ದಾರೆ.

ಈ ಪ್ರದೇಶಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು,  ಅಲಕಾನಂದ ನದಿ ತಟದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.