ಉತ್ತರಾಖಂಡ: ಪರಿಹಾರ ಕಾರ್ಯಾಚರಣೆಗೆ ಮಳೆ ಅಡ್ಡಿ
ಡೆಹ್ರಾಡೂನ್: ಪ್ರಳಯ ಪೀಡಿತ ಉತ್ತರಾಖಂಡದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದ ಕಾರಣ ಪರಿಣಾಮ ಪರಿಹಾರ ಕಾರ್ಯಚರಣೆಗೆ ಧಕ್ಕೆಯುಂಟಾಗಿದೆ.
ರುದ್ರಪ್ರಯಾಗ್, ಉತ್ತರಕಾಶಿ ಮತ್ತು ಚಮೋಲಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಪರಿಹಾರ ಸಾಮಾಗ್ರಿಗಳನ್ನೊದಗಿಸುತ್ತಿರುವ ಹೆಲಿಕಾಪ್ಟರ್ ಹಾರಾಟಕ್ಕೆ ಅಡಚಣೆಯುಂಟಾಗಿದೆ.
ಮಳೆಯಿಂದಾಗಿ ರಸ್ತೆಗಳು ಕೆಟ್ಟುಹೋಗಿದ್ದು ಸಂಚಾರಕ್ಕೆ ತಡೆಯುಂಟು ಮಾಡಿವೆ. ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಆಹಾರ ಸಾಮಾಗ್ರಿಗಳನ್ನು ಸಾಗಿಸುವುದು ಕಷ್ಟವಾಗಿದೆ. ರಸ್ತೆ, ಸೇತುವೆಗಳು ಜಲಾವೃತವಾಗಿರುವುದರಿಂದ ಹೆಲಿಕಾಪ್ಟರ್ ಮೂಲಕವೇ ಆಹಾರ ಸಾಮಾಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಈಗ ಹೆಲಿಕಾಪ್ಟರ್ ಹಾರಾಟವೂ ಅಸಾಧ್ಯವಾಗಿರುವುದರಿಂದ ಪ್ರಸ್ತುತ ಪ್ರದೇಶದ ಜನರು ಕಂಗಾಲಾಗಿದ್ದಾರೆ.
ಏತನ್ಮಧ್ಯೆ, ರಾಜ್ಯ ವಿಪತ್ತ ನಿರ್ವಹಣಾ ಅಧಿಕಾರಿಗಳು ಸಭೆ ನಡೆಸಿ ಹವಾಮಾನ ವೈಪರೀತ್ಯದಲ್ಲೂ ಹೆಲಿಕಾಪ್ಟರ್ ಹಾರಾಟ ಮುಂದುವರಿಸುವುದು ಹೇಗೆ? ಎಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ.
ಅದೇ ವೇಳೆ ಕೇದಾರಘಾಟಿಯಲ್ಲಿ ಪ್ರಳಯಕ್ಕೆ ಸಿಲುಕಿ ಮೃತಪಟ್ಟವರ ಶವವನ್ನು ಹೊರತೆಗೆಯುವುದು ಕೂಡಾ ಕಷ್ಟವಾಗುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಹೇಳಿದ್ದಾರೆ.
ಒಟ್ಟಿನಲ್ಲಿ ಉತ್ತರಾಖಂಡದಲ್ಲಿನ ಕುಂಭದ್ರೋಣ ಮಳೆಯಿಂದಾಗಿ ಪರಿಹಾರ ಕಾರ್ಯಾಚರಣೆಗಳು ಸದ್ಯ ಸ್ಥಗಿತಗೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

