ಈಗಿನ ಸುದ್ದಿ

ಮಹಾಬೋಧಿ ದೇಗುಲಕ್ಕೆ ಬಿಗಿ ಭದ್ರತೆ ನೀಡಲಾಗಿತ್ತು: ನಿತೀಶ್

Published On :

ನವದೆಹಲಿ: ಮಹಾಬೋಧಿ ದೇವಾಲಯಕ್ಕೆ ಬಾಂಬ್ ಬೆದರಿಕೆಯಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ಕೊಟ್ಟ ಹಿನ್ನೆಲೆಯಲ್ಲಿ ಪ್ರಸ್ತುತ ದೇಗುಲದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಹೇಳಿದ್ದಾರೆ.

ದೇಗುಲದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದ್ದರೂ, ಅಲ್ಲಿ ಬಾಂಬ್ ಸ್ಫೋಟವಾಗಿದೆ. ಇನ್ಮುಂದೆ ಅಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು  ಎಂದು ಮಾಧ್ಯಮದವರಲ್ಲಿ ಮಾತನಾಡಿದ ನಿತೀಶ್ ಹೇಳಿದ್ದಾರೆ.

ಆದಾಗ್ಯೂ, ಮಹಾಬೋಧಿ ದೇಗುಲದಲ್ಲಿ ಭದ್ರತೆ ಕಡಿಮೆಯಾಗಿತ್ತು ಎಂಬ ಹೇಳಿಕೆಯನ್ನು ನಿತೀಶ್ ಅಲ್ಲಗೆಳೆದಿದ್ದಾರೆ.

ವಿಶ್ವದಲ್ಲೇ ಪ್ರಖ್ಯಾತವಾದ ಬೌದ್ಧ ದೇಗುಲಕ್ಕೆ ಈ ರೀತಿಯ ದಾಳಿಯಾಗಿರುವುದಕ್ಕೆ ಭದ್ರತೆಯಲ್ಲಿನ ಕುಂದುಕೊರತೆಯೇ ಕಾರಣ ಎಂಬ ಟೀಕೆ ವ್ಯಾಪಕವಾಗಿ ಕೇಳಿಬಂದಿತ್ತು.

ಏತನ್ಮಧ್ಯೆ, ಪ್ರಸ್ತುತ ದೇಗುಲ ಮತ್ತು ಸುತ್ತಲಿನ ಪ್ರದೇಶಕ್ಕೆ ಬಾಂಬ್ ಹಾಕುವ ಮೂಲಕ ಅಲ್ಲಿನ ಜನರು ಹಾಗು ಪ್ರವಾಸಿಗಳನ್ನು ಭಯಭೀತಗೊಳಿಸುವ ಹುನ್ನಾರ ನಡೆಸಲಾಗಿದೆ ಎಂದು ನಿತೀಶ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.