ಈಗಿನ ಸುದ್ದಿ

ಸಿಕಂದರಾಬಾದ್‌ನಲ್ಲಿ ಹೋಟೆಲ್ ಕುಸಿತ: 11 ಸಾವು

Published On :

ಹೈದರಾಬಾದ್: ಸಿಕಂದರಾಬಾದ್‌ನಲ್ಲಿರುವ ಹೋಟೆಲ್‌ವೊಂದು ಕುಸಿದು ಬಿದ್ದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ ಮತ್ತು 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸಿಕಂದರಬಾದ್‌ನ ರಾಷ್ಟ್ರಪತಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಸಿಟಿ ಲೈಟ್ ಹೋಟೆಲ್‌ನ ಕಟ್ಟಡ ಇಂದು ಬೆಳಗಿನ ಜಾವ 6.30ರ ಸುಮಾರಿಗೆ ಕುಸಿದು ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ 20 ಮಂದಿಯನ್ನು ರಕ್ಷಿಸಿದ್ದಾರೆ ಮತ್ತು ಗಾಯಗೊಂಡ 15 ಮಂದಿಯನ್ನು ಸರ್ಕಾರಿ ಆಸ್ಪತ್ರೆ ದಾಖಲು ಮಾಡಿದ್ದಾರೆ. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ಗಾಯಗೊಂಡವರಿಗೆ ತಕ್ಷಣ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಟ್ಟಡದ ಅವಶೇಷಗಳಡಿಯಿಂದ ಈವರೆಗೆ 11 ಮೃತ ದೇಹಗಳನ್ನು ಹೊರ ತೆಗೆದಿದ್ದೇವೆ ಮತ್ತು ಇನ್ನು 20 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೈದರಾಬಾದ್ ಪೊಲೀಸ್ ಆಯುಕ್ತ ಅನುರಾಗ್ ಶರ್ಮಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.