ಬೋಧಗಯಾ ಸ್ಫೋಟ: 6 ಶಂಕಿತ ಆರೋಪಿಗಳು ಸಿಸಿಟಿವಿಯಲ್ಲಿ ಸೆರೆ

ಬೋಧಗಯಾ: ಬೋಧಗಯಾ ಸರಣಿ ಸ್ಫೋಟ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಆರು ಶಂಕಿತ ಆರೋಪಿಗಳ ಬಗ್ಗೆ ಮಂಗಳವಾರ ಬಿಹಾರ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಸ್ಫೋಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಮಹಾಬೋಧಿ ದೇವಸ್ಥಾನಕ್ಕೆ ಅಳವಡಿಸಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿರುವವರ ಪೈಕಿ ಸಂದೇಹಾಸ್ಪದವಾಗಿ ವರ್ತಿಸಿರುವ ಆರು ಮಂದಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಸ್ಫೋಟಕ್ಕೂ ಮುನ್ನ ಮಹಾಬೋಧಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರ ಚಲನವಲನಗಳ ದೃಶ್ಯಾವಳಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿದ್ದು, ದೃಶ್ಯವಳಿಗಳ ಪ್ರಕಾರ ದೇವಸ್ಥಾನದ ಆವರಣದೊಳಕ್ಕೆ ಆರು ಮಂದಿ ಸಂದೇಹಾಸ್ಪದವಾಗಿ ಪ್ರವೇಶಿಸಿದ್ದಾರೆ. ಅದರಲ್ಲಿ ಮೂರು ಮಂದಿ ಪ್ರವೇಶ ದ್ವಾರದ ಮೂಲಕ ಪ್ರವೇಶಿಸದೆ ನಿಷಿದ್ಧ ದ್ವಾರದ ಮೂಲಕ ಪ್ರವೇಶಿಸಿದ್ದು, ಇದೇ ವೇಳೆ ಮತ್ತಿಬ್ಬರು ಪ್ರವೇಶ ದ್ವಾರದ ಹತ್ತಿರವೇ ತಮ್ಮ ಕಾರನ್ನು ನಿಲ್ಲಿಸಿ ಆತುರಾತುರವಾಗಿ ದೇವಸ್ಥಾನವನ್ನು ಪ್ರವೇಶಿಸಿದ್ದಾರೆ. ಅಲ್ಲದೆ ಮತ್ತೊಬ್ಬ ವ್ಯಕ್ತಿ ಎತ್ತರವಾಗಿದ್ದು, ಬ್ಯಾಗ್ ಸಹಿತ ದೇವಸ್ಥಾನಕ್ಕೆ ಪ್ರವೇಶಿಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಳಪೆ ಮಟ್ಟದ ಸಿಸಿ ಕ್ಯಾಮರಗಳನ್ನು ದೇವಸ್ಥಾನದಲ್ಲಿ ಅಳವಡಿಸಿರುವುದರಿಂದ ಸೆರೆಯಾಗಿರುವ ದೃಶ್ಯವಳಿಗಳು ಅಸ್ಪಷ್ಟವಾಗಿ ಇರುವುದರಿಂದ ತನಿಖೆಗೆ ತೊಂದರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾಬೋಧಿ ದೇವಸ್ಥಾನದ ಸುತ್ತಮುತ್ತಲು ಭಾನುವಾರ ಮುಂಜಾನೆ ಸರಣಿ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


