ಈಗಿನ ಸುದ್ದಿ

ಬಿಜೆಪಿಯಿಂದ ಆಹ್ವಾನ ಬಂದರೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ: ಬಿಎಸ್‌ವೈ

ಬಿಜೆಪಿಯಿಂದ ಆಹ್ವಾನ ಬಂದರೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ: ಬಿಎಸ್‌ವೈ
Published On :

ಬೆಂಗಳೂರು: ಮತ್ತೆ ಬಿಜೆಪಿಗೆ ಮರಳುವ ಬಗ್ಗೆ ಚಿಂತನೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿಯಿಂದ ನನಗೆ ಆಹ್ವಾನ ಬಂದಿಲ್ಲ. ಒಂದು ವೇಳೆ ಆಹ್ವಾನ ಬಂದರೆ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಬುಧವಾರ ಅಡ್ಡಗೋಡೆ ಮೇಲೆ ದೀಪವಿಟ್ಟಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಾವು ಯಾರ ಜತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ನಾಳೆ ಕೆಜೆಪಿ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.

ಇದೇ ವೇಳೆ ತಾವು ಬಿಜೆಪಿ ಸೇರ್ಪಡೆಗೆ ತೊಡಕಾಗಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರನ್ನು ಭೇಟಿ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸದ್ಯಕ್ಕೆ ಅನಂತ್ ಕುಮಾರ್ ಭೇಟಿ ಮಾಡುವ ವಿಚಾರ ತಮ್ಮ ಮುಂದಿಲ್ಲ ಎಂದು ಹೇಳಿದ್ದಾರೆ.

ಇನ್ನು ರಾಜ್ಯ ಬಿಜೆಪಿ ನಾಯಕರು ದೆಹಲಿಯಲ್ಲಿ ತಮ್ಮ ಪರ ಲಾಬಿ ನಡೆಸಿದ ವಿಚಾರಕ್ಕೂ ತಮಗೂ ಸಂಬಂಧವಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.