ಶಾಸಕ, ಸಂಸದರು ಜೈಲು ಶಿಕ್ಷೆಗೆ ಒಳಗಾದರೆ ಸದಸ್ಯತ್ವ ರದ್ದು: ಸುಪ್ರೀಂ

ನವದೆಹಲಿ: ಸಂಸದರು ಹಾಗೂ ಶಾಸಕರು ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆಗೆ ಒಳಗಾದರೆ ಅಂತಹ ಸಂಸದರ ಹಾಗೂ ಶಾಸಕರ ಸದಸ್ಯತ್ವ ರದ್ದುಗೊಳಿಸುವುದಾಗಿ ಬುಧವಾರ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶ ಇಂದಿನಿಂದಲೇ ಜಾರಿಗೆ ಬರಲಿದೆ.
ಕಾನೂನು ಬಾಹಿರ ಚಟುವಟಿಕೆ ಹಾಗೂ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 2 ವರ್ಷ ಹಾಗೂ ಅದಕ್ಕಿಂತ ಹೆಚ್ಚು ಜೈಲು ಶಿಕ್ಷೆಗೆ ಒಳಗಾಗುವ ಶಾಸಕರ ಹಾಗೂ ಸಂಸದರ ಸದಸ್ಯತ್ವ ಅನರ್ಹಗೊಳ್ಳಲಿದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಯಾವುದೇ ವಿಚಾರಾಣಾಧಿನ ಕೋರ್ಟ್‌ನಲ್ಲಿ ಶಾಸಕ ಹಾಗೂ ಸಂಸದರ ವಿರುದ್ಧದ ಆರೋಪಗಳು ಸಾಬೀತಾದ ದಿನದಿಂದಲೇ ಅಭ್ಯರ್ಥಿಗಳ ಸದಸ್ಯತ್ವ ರದ್ದುಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಆರೋಪ ಸಾಬೀತಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಾಯಕರು ಸಹ ಇನ್ನುಮುಂದೆ ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಮತ್ತು ಈ ಆದೇಶ ಹಿಂದಿನ ಪ್ರಕರಣಗಳಿಗೆ ಅನ್ವಯಿಸುವುದಿಲ್ಲ. ಭವಿಷ್ಯದಲ್ಲಾಗುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


