ಈಗಿನ ಸುದ್ದಿ

ಉ.ಪ್ರದೇಶ: ಜಾತಿ ಆಧಾರಿತ ರ್ಯಾಲಿಗೆ 'ಹೈ' ಬ್ರೇಕ್

Published On :

ಲಖನೌ: ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಜಾತಿ ಆಧಾರಿತ ರ್ಯಾಲಿಗಳಿಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ನಿಷೇಧ ಹೇರಿದೆ. ಇದರೊಂದಿಗೆ ಜಾತಿ ಆಧಾರಿತ ಪ್ರಚಾರ ಕಾರ್ಯಕ್ರಮಗಳನ್ನು ನಡೆಸದಂತೆ ಪ್ರಮುಖ ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದೆ.

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಎರಡು ದಿನಗಳ ಹಿಂದಷ್ಟೆ ಬ್ರಾಹ್ಮಣ ಜಾತಿ ಆಧಾರಿತ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಲಖನೌನಲ್ಲಿ ನಡೆಸಿದ್ದರು. ಈ ಸಂಬಂಧ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ.

ಪ್ರಚಾರ ಕಾರ್ಯದಲ್ಲಿ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಹೆಚ್ಚಾಗಿ ಜಾತಿ ಆಧಾರಿತ ಪ್ರಚಾರ ನಡೆಸುತ್ತಿರುವುದು ಬಹಿರಂಗಗೊಂಡಿತ್ತು. ಇದರಿಂದ ಕೋಮುಗಲಭೆಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟಿರುವ ಕೋರ್ಟ್, ಜಾತಿ ಆಧಾರಿತ ರ್ಯಾಲಿಗಳನ್ನು ನಿಷೇಧಿಸಿದೆ.

ಮುಂದಿನ ಸಾರ್ವತ್ರಿಕ ಚುನಾವಣೆಯ ಸಂಬಂಧ ಉತ್ತರ ಪ್ರದೇಶದಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಜಾತಿ ಆಧಾರಿತ ಪ್ರಚಾರ ಕಾರ್ಯವನ್ನು ಅನುಸರಿಸುತ್ತಿವೆ. ಹೀಗಾಗಿ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಎಸ್ಪಿ ಹಾಗೂ ಬಿಎಸ್ಪಿಗಳಿಗೆ ಜಾತಿ ಆಧಾರಿತ ಪ್ರಚಾರ ನಡೆಸದಂತೆ ಕೋರ್ಟ್ ಸೂಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.