ಪ್ರಣಾಳಿಕೆಯ ಶೇ.40ರಷ್ಟು ಭರವಸೆಗಳನ್ನು ಈಡೇರಿಸಿದ್ದೇವೆ: ಸಿಎಂ

ಬೆಂಗಳೂರು: ನಮ್ಮ ಪಕ್ಷದ ಪ್ರಾಣಿಳಿಕೆಯಲ್ಲಿನ ಶೇ.40ರಿಂದ 50ರಷ್ಟು ಭರವಸೆಗಳನ್ನು ಈ ಬಜೆಟ್ನಲ್ಲಿ ಈಡೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಬಜೆಟ್ ಮಂಡಿಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಎಲ್ಲರ ಬೆಳವಣಿಗೆಗೆ ಪೂರಕವಾದ ಬಜೆಟ್ನ್ನು ನಾನು ಮಂಡಿಸಿದ್ದೇನೆ. ವಿಶೇಷವಾಗಿ ಈ ಬಾರಿ ಬೆಂಗಳೂರಿಗೆ ಹೆಚ್ಚು ಒತ್ತು ನೀಡಲಾಗಿದ್ದು, ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ಕಳೆದ ಬಾರಿ ಬಿಜೆಪಿ ಸರ್ಕಾರ ಮಂಡಿಸಿದ್ದ ಬಜೆಟ್ಗಿಂತ ಈ ಬಾರಿಯ ಬಜೆಟ್ನ ಗಾತ್ರವನ್ನು ಶೇ. 18ರಷ್ಟು ಹೆಚ್ಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕ್ರಿಯೆಗೆ ಉತ್ತರಿಸಿದ ಸಿಎಂ, ಅವರ(ಯಡಿಯೂರಪ್ಪ) ಸೈಕಲ್ ಯೋಜನೆ ನಾವು ನಿಲ್ಲಿಸುವುದಿಲ್ಲ. ಅದು ಎರಡು, ಮೂರು ವರ್ಷದ ಹಳೆಯ ಯೋಜನೆಯಾಗಿದ್ದರಿಂದ ಅದನ್ನು ಬಜೆಟ್ನಲ್ಲಿ ಪ್ರಸ್ತಾಪಿಸಿಲ್ಲ. ಆದರೆ ಸಂಧ್ಯಾ ಸುರಕ್ಷಾ, ಭಾಗ್ಯಲಕ್ಷ್ಮಿ ಯೋಜನೆ ಹಾಗೂ ಹೆಣ್ಣು ಮಕ್ಕಳಿಗೆ ಸೈಕಲ್ ವಿತರಣೆ ಯೋಜನೆ ಮುದುವರೆಯಲಿವೆ ಎಂದು ಸ್ಪಷ್ಟಪಡಿಸಿದರು.
ಇನ್ನು ಪ್ರತ್ಯೇಕ ಕೃಷಿ ಬಜೆಟ್ ಮಂಡಿಸದಿರುವುದನ್ನು ಸಮರ್ಥಿಸಿಕೊಂಡ ಸಿಎಂ, ಅದಕ್ಕಾಗಿ ಪ್ರತ್ಯೇಕ ಪುಸ್ತಕ ಪ್ರಿಂಟ್ ಮಾಡುವುದರಿಂದ ಯಾವುದೇ ಲಾಭ ಇಲ್ಲ. ಕೃಷಿ ಅಭಿವೃದ್ಧಿ ಬೇಕಾದ ಅಗತ್ಯ ಕ್ರಮಗಳನ್ನು ಈ ಬಜೆಟ್ನಲ್ಲೇ ತೆಗೆದುಕೊಳ್ಳಲಾಗಿದೆ ಎಂದರು.
ನೀರಾವರಿ ಹಾಗೂ ಕೃಷಿ ಹೆಚ್ಚಿನ ಒತ್ತು ಕೊಟ್ಟಿದ್ದೇನೆ. ಅಲ್ಲದೆ ಕೃಷಿ ಬೆಲೆ ಆಯೋಗ ಸ್ಥಾಪನೆ ಮಾಡಿದ್ದೇವೆ ಮತ್ತು ಆಯೋಗಕ್ಕಾಗಿ 1 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ. ಇದು ಕೃಷಿ ಬೆಲೆ ಕುಸಿದರೆ ಅದನ್ನು ತಡೆಯುವ ಕೆಲಸ ಮಾಡುತ್ತದೆ. ತಜ್ಞರ ತಂಡ ಈ ಆಯೋಗದಲ್ಲಿರುತ್ತದೆ ಎಂದು ಸಿಎಂ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


