ರಾಹುಲ್ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲ್ಲ: ದಿಗ್ವಿಜಯ್

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಎಲ್ಲೂ ಕಾಂಗ್ರೆಸ್ ಘೋಷಣೆ ಮಾಡಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಶುಕ್ರವಾರ ಹೇಳಿದ್ದಾರೆ.
ಬಿಜೆಪಿಯ ಪ್ರಚಾರ ಸಮಿತಿಯ ಅಧ್ಯಕ್ಷರಾಗಿರುವ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಆದರೆ ಕಾಂಗ್ರೆಸ್ ಚುನಾವಣೆಗು ಮುನ್ನ ಪ್ರಧಾನಿ ಹಾಗೂ ಮುಖ್ಯಮಂತ್ರಿಯ ಹೆಸರನ್ನು ಘೋಷಿಸುವ ಪರಿಪಾಠ ಅನುಸರಿಸುತ್ತಿಲ್ಲ. ಹೀಗಾಗಿ ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಪುನಃ ಪ್ರಧಾನಿ ಮನಮೋಹನ್ ಸಿಂಗ್ ಅವರೆ ಪ್ರಧಾನಿಯಾಗಿ ಮುಂದುವರೆಯುತ್ತಾರೆಯೆ ಎಂಬುದರ ಕುರಿತು ದಿಗ್ವಿಜಯ್ ಸ್ಪಷ್ಟಪಡಿಸಿಲ್ಲ. ಅಲ್ಲದೆ ಬಿಜೆಪಿ ಪಕ್ಷ ಯಾವುದೇ ಒಂದು ನಿರ್ಧಾರವನ್ನು ಕೈಗೊಳ್ಳಲು ಮುಕ್ತವಾಗಿದೆ. ಆದರೆ ಬಿಜೆಪಿಯ ಹಾಗೆ ಕಾಂಗ್ರೆಸ್ ವ್ಯಕ್ತಿಗತ ರಾಜಕೀಯ ಮಾಡಿಲ್ಲ. ಕಾಂಗ್ರೆಸ್ಗೆ ತನ್ನದೆ ಆದ ತತ್ವ ಸಿದ್ಧಾಂತ ಹೊಂದಿದೆ ಆ ನಿಟ್ಟಿನಲ್ಲೇ ಪಕ್ಷ ಕಾರ್ಯ ನಿರ್ವಹಿಸಲಿದೆ ಎಂದು ದಿಗ್ವಿಜಯ್ ಹೇಳಿದ್ದಾರೆ.
ಪ್ರಧಾನಿ ಅಭ್ಯರ್ಥಿಯಾಗಿರುವ ಮೋದಿ ಅವರ ಆಗಮನದೊಂದಿಗೆ ಚುನಾವಣೆಯಲ್ಲಿ ಕೋಮು ಧ್ರುವೀಕರಣಕ್ಕೆ ಕಾರಣವಾಗಲಿದೆ. ಆದರೆ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಯನ್ನು ವ್ಯವಹಾರಿಕವಾಗಿ ತೆಗೆದುಕೊಂಡಿಲ್ಲ ಎಂದು ದಿಗ್ವಿಜಯ್ ಸ್ಪಷ್ಪಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


