ಈಗಿನ ಸುದ್ದಿ

ಸಿದ್ದು ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ

ಸಿದ್ದು ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ
Published On :

ಬೆಂಗಳೂರು: ಮುಖ್ಯಮಂತ್ರಿಯಾಗಿ ಮೊದಲ ಹಾಗೂ ಒಟ್ಟಾರೆ ಇಂದು 8ನೇ ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು, ಒಟ್ಟು 1 ಲಕ್ಷದ 20 ಸಾವಿರದ 717 ಕೋಟಿ ರುಪಾಯಿ ಗಾತ್ರದ ಬಜೆಟ್‌ನಲ್ಲಿ ಶಿಕ್ಷೆಣಕ್ಕೆ ಅತೀ ಹೆಚ್ಚು ಹಣ ಹಂಚಿಕೆ ಮಾಡಿದ್ದಾರೆ.

ಪ್ರಾಥಮಿಕ ಶಿಕ್ಷಣ ಇಲಾಖೆಗೆ 15,680 ಕೋಟಿ, ಉನ್ನತ ಶಿಕ್ಷಣಕ್ಕೆ  3,243 ಕೋಟಿ ಅನುದಾನ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಶಿಕ್ಷಣಕ್ಕಾಗಿ 1369 ಕೋಟಿ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಒಟ್ಟು 18,923 ಕೋಟಿಯಷ್ಟು ಬಂಪರ್ ಕೊಡುಗೆಯನ್ನು ಸಿದ್ದು ಘೋಷಿಸಿದ್ದಾರೆ.

ಎಸ್ಸೆಸ್ಸೆಲ್ಸಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 7 ಸಾವಿರ ರುಪಾಯಿ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ಉದ್ದೇಶಿದೆ. ಅಲ್ಲದೆ ಶೇ.75ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 15 ಸಾವಿರ ರುಪಾಯಿ ಪ್ರೋತ್ಸಾಹ ಧನ ನೀಡಲು ಸರ್ಕಾರ ನಿರ್ಧರಿಸಿದೆ.

ಮೆಟ್ರಿಕ್ ಪೂರ್ವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು 150 ರಿಂದ 200ರೂಗೆ ಹೆಚ್ಚಿಸಲಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡುತ್ತಿದ್ದ 850 ರುಪಾಯಿ ವಿದ್ಯಾರ್ಥಿ ವೇತನವನ್ನು 1 ಸಾವಿರ ರುಪಾಯಿಗೆ ಹೆಚ್ಚಳ ಮಾಡಲಾಗಿದೆ.

ಧಾರವಾಡದಲ್ಲಿ ಐಐಐಟಿ ಸ್ಥಾಪನೆಗೆ 45 ಕೋಟಿ ಅನುಧಾನ. ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ವೈಫೈ ಸೌಲಭ್ಯ ಕಲ್ಪಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಲೆಮಾರಿ ಜನಾಂಗಕ್ಕೆ ವಿಶೇಷ ಪ್ಯಾಕೇಜ್ ಅಡಿಯಲ್ಲಿ 50 ಕೋಟಿ ರು. ಬಿಡುಗಡೆ. ಅಲ್ಲದೆ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಜಗಜೀವನರಾಂ ಅಧ್ಯಯನಕ್ಕೆ 50 ಲಕ್ಷ ಅನುದಾನ ನೀಡಲಾಗಿದೆ.

ಶಾಲೆಗಳಲ್ಲಿ ಹೆಣ್ಣು ಮಕ್ಕಳ ಹಾಜರಾತಿಯನ್ನು ಹೆಚ್ಚಿಸುವ ಉದ್ದೇಶದಿಂದ 1ನೇ ತರಗತಿಯ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹಧನ

  • ಉನ್ನತ ಶಿಕ್ಷಣಕ್ಕೆ - 3,243 ಕೋಟಿ ಅನುದಾನ
  • ಪ್ರಾಥಮಿಕ ಶಿಕ್ಷಣ ಇಲಾಖೆಗೆ 15,680 ಕೋಟಿ
  • ಸ್ಕೌಟ್ಸ್ ಆಂಡ್ ಗೈಡ್ಸ್‌ಗೆ 3 ಕೋಟಿ
  • ಕ್ರಿಶ್ಚಿಯನ್ ವಿದ್ಯಾರ್ಥಿಗಳಿಗಾಗಿ 100 ಕೋಟಿ ಅನುದಾನ
  • ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ
  • ಒಂದನೇ ತರಗತಿಯಿಂದ ಇಂಗ್ಲೀಷ್ ಕಲಿಕೆಗೆ ಕ್ರಮ
  • ರಾಜ್ಯದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಸ್ಥಾಪನೆ
  • ಎಸ್‌ಸಿ/ಎಸ್‌ಟಿ ವಸತಿ ಶಾಲೆಗಳ ಮೂಲ ಸೌಕರ್ಯಕ್ಕೆ 100 ಕೋಟಿ
  • 4 ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.