ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 3001 ಕೋಟಿ
ಬೆಂಗಳೂರು: ತಾವು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿರುವ ಸಾಮಾಜಿಕ ನ್ಯಾಯದ ಕಲ್ಪನೆಗೆ ಸಾಕಾರ ರೂಪ ನೀಡಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಮಂಡಿಸಿದ ತಮ್ಮ 8ನೇ ಬಜೆಟ್ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಹೆಚ್ಚು ಅನುಕೂಲ ಕಲ್ಪಿಸುವ ಯತ್ನ ಮಾಡಿದ್ದಾರೆ.
ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳಿಗೆ ಬಜೆಟ್ನಲ್ಲಿ ವಿಶೇಷ ಕಾರ್ಯಕ್ರಮ ಪ್ರಕಟಿಸಿರುವ ಸಿದ್ದರಮಾಯ್ಯ ಅವರು, ಮಡಿವಾಳ, ಸವಿತಾ, ಹಡಪದ, ಕುಂಬಾರ, ಕಮ್ಮಾರ, ಗಾಣಿಗ, ತಿಗಳ, ಉಪ್ಪಾರ, ಗೌಳಿ ಜನಾಂಗಕ್ಕೆ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ 1 ಲಕ್ಷದವರೆಗೆ ಸಾಲ ಸೌಲಭ್ಯ ಘೋಷಿಸಿದ್ದಾರೆ.
ಮೊಗವೀರ ಸಮುದಾಯ ಭವನ ನಿರ್ಮಾಣಕ್ಕೆ 2 ಕೋಟಿ ರು. ಅನುದಾನ ಹಾಗೂ ಮೊಗವೀರ ಸಮುದಾಯದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸಾಲ.
ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪನೆಗೆ 5 ಕೋಟಿ ರು. ಅನುದಾನ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯಡಿ ಕಲ್ಯಾಣ ಕಚೇರಿ ಸ್ಥಾಪನೆಗೆ 4 ಕೋಟಿ ರು. ಅನುದಾನ ಪ್ರಕಟಿಸಿದ್ದಾರೆ.
ಗೊಲ್ಲ ಸಮುದಾಯ ಕಾಲೋನಿಗಳ ಶೈಕ್ಷಣಿಕ ಅಭಿವೃದ್ದಿಗೆ 25 ಕೋಟಿ ಹಾಗೂ ಬಂಜಾರ ಜನಾಂಗದ ಸೇವಾಲಾಲ್ ಜನ್ಮಸ್ಥಳ ಅಭಿವೃದ್ಧಿಗೆ 2 ಕೋಟಿ ಅನುದಾನ.
ದರ್ಜಿ, ಬಡಗಿ, ಭಜಂತ್ರಿ, ಕುರುಬ, ಮೀನುಗಾರ, ನೇಕಾರ ಸಮುದಾಯಗಳ ವೃತ್ತಿ ಅಭಿವೃದ್ದಿಗೆ ಪ್ರತ್ಯೇಕ ಯೋಜನೆಗಳ ಬಳಕೆ.
2ಎ, 2ಬಿ, 3ಎ, 3ಬಿ, ಪ್ರವರ್ಗದ ವಿದ್ಯಾರ್ಥಿಗಳ ಆದಾಯ ಮಿತಿ ವಾರ್ಷಿಕ 1 ಲಕ್ಷಕ್ಕೆ ಹೆಚ್ಚಳ. ಪ್ರವರ್ಗ-1ಕ್ಕೆ ಸೇರಿದ ವಿದ್ಯಾರ್ಥಿಗಳ ಆದಾಯ ಮಿತಿ 2.5 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.
ಹಿಂದುಳಿದ ವರ್ಗಗಳ ಧಾರ್ಮಿಕ ಹಾಗೂ ಇತರೆ ಸಂಘ-ಸಂಸ್ಥೆಗಳಿಗೆ 75 ಕೋಟಿ ರು. ಅನುದಾನ ಹಾಗೂ ಹಿಂದುಳಿದ ವರ್ಗಗಳ ಖಾಸಗಿ ಹಾಸ್ಟೆಲ್ ನಿರ್ವಗಹಣೆಗೆ ಗರಿಷ್ಟ 5 ಲಕ್ಷ ರು. ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

