ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ

ರಾಂಚಿ: ಜೆಎಂಎಂ ಮುಖ್ಯಸ್ಥ ಶಿಬು ಸೊರೇನ್ ಅವರ ಪುತ್ರ ಹೇಮಂತ್ ಸೊರೇನೆ ಅವರು ಶನಿವಾರ ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ಬೆಳಗ್ಗೆ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸೈಯ್ಯದ್ ಅಹ್ಮದ್ ಅವರು 37 ವರ್ಷದ ಬುಡಕಟ್ಟು ಜನಾಂಗದ ನಾಯಕ ಹೇಮಂತ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಇದೇ ವೇಳೆ ಕಾಂಗ್ರೆಸ್ ಹಾಗೂ ಆರ್ಜೆಡಿ ಶಾಸಕಾಂಗ ಪಕ್ಷದ ನಾಯಕರಾದ ರಾಜೇಂದ್ರ ಪ್ರಸಾದ್ ಸಿಂಗ್ ಮತ್ತು ಅನ್ನಪೂರ್ಣ ದೇವಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಹೇಮಂತ್ ಸೊರೇನ್ ಅವರು ನವೆಂಬರ್ 15, 2000ರಲ್ಲಿ ಜಾರ್ಖಂಡ್ ನೂತನ ರಾಜ್ಯವಾಗಿ ರಚನೆಯಾದ ಬಳಿಕ ಮುಖ್ಯಮಂತ್ರಿಯಾದ ಐದನೇ ಬುಡಕಟ್ಟು ನಾಯಕರಾಗಿದ್ದಾರೆ. ಈ ಮುಂಚೆ ಬಾಬುಲಾಲ್ ಮರಾಂಡಿ, ಅರ್ಜುನ್ ಮುಂಡ, ಶಿಬು ಸೊರೇನ್ ಮತ್ತು ಮಧು ಕೊಡಾ ಜಾರ್ಖಂಡ್ನ ಮುಖ್ಯಮಂತ್ರಿಗಳಾಗಿದ್ದರು.
ಕಾಂಗ್ರೆಸ್ ಬೆಂಬಲದೊಂದಿಗೆ ಜಿಎಂಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಹೇಮಂತ್ ಸೊರೇನ್ ಅವರು ಕಳೆದ ಮಂಗಳವಾರ ನೂತನ ಸರ್ಕಾರ ರಚನೆ ಹಕ್ಕು ಪ್ರತಿಪಾದಿಸಿದ್ದರು.
ಜನವರಿ 8ರಂದು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಜೆಎಂಎಂ ಹಿಂಪಡೆದ ನಂತರ ಜನವರಿ 18ರಂದು ಜಾರ್ಖಂಡ್ನಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿತ್ತು. 6 ತಿಂಗಳ ರಾಷ್ಟ್ರಪತಿ ಆಡಳಿತದ ನಂತರ ಇದೀಗ ಜೆಎಂಎಂ ನೇತೃತ್ವದ ಕಾಂಗ್ರೆಸ್, ಆರ್ಜೆಡಿ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


