ಕೇರಳ; ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಆಂಟನಿ

ಕೊಚ್ಚಿ: ಸೋಲಾರ್ ಪ್ರಾಜೆಕ್ಟ್ ಹಗರಣ ಸಂಬಂಧ ಪ್ರತಿಪಕ್ಷಗಳ ತೀವ್ರ ವಿರೋಧಕ್ಕೆ ಒಳಗಾಗಿರುವ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಕೊಚ್ಚಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತರೂಢ ಸರ್ಕಾರಗಳ ಮೇಲೆ ವಿವಾದಗಳು ಬರುವುದು ಸರ್ವೆ ಸಾಮಾನ್ಯ. ವಿವಾದಗಳಿಗೆ ಅಂಜಿ ಸರ್ಕಾರವನ್ನು ವಿಸರ್ಜಿಸಲು ಸಾಧ್ಯವಿಲ್ಲ. ಹೀಗಾಗಿ ಪ್ರಸ್ತುತ ಕೇರಳದಲ್ಲಿ ನಾಯತ್ವ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ, ತಕ್ಷಣ ನಾಯಕತ್ವ ಬದಲಾವಣೆಯ ತೀರ್ಮಾನ ತೆಗೆದುಕೊಳ್ಳಲು ನಾನೇನು ನ್ಯಾಯಾಧೀಶನಲ್ಲ. ತನಿಖೆ ನಡೆಯುತ್ತಿದ್ದು, ಸತ್ಯ ಹೊರಬರುವವರೆಗೆ ಕಾದು ನೋಡಬೇಕು. ಸದ್ಯಕ್ಕೆ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರೇ ಮುಂದುವರೆಯುತ್ತಾರೆ ಎಂದು ಆಂಟನಿ ಹೇಳಿದ್ದಾರೆ.
ಈ ಹಗರಣದ ಬಗ್ಗೆ ನಾಲ್ಕು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿಯುವವರೆಗೆ ಪ್ರತಿಪಕ್ಷಗಳು ಕಾಯಬೇಕಿದೆ. ಪ್ರತಿಪಕ್ಷಗಳು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಉಮ್ಮನ್ ಚಾಂಡಿ ಅವರನ್ನು ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದು ಆಂಟನಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


